Advertisement
ಶಾಂತಿ ಕದಡುವವರ ಪಟ್ಟಿ ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯದಲ್ಲಿ ತೊಡಗಿರುವ 20 ಮಂದಿಯ ಪಟ್ಟಿ ತಯಾರಿಸಲಾಗಿದೆ. ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶಾಂತಿ- ನೆಮ್ಮದಿಗೆ ಭಂಗ ತರುವ ದುಷ್ಕೃತ್ಯಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರಿನಿಂದ, ಕೋಲಾರ, ಶಿವಮೊಗ್ಗ ಸೇರಿದಂತೆ ನಾನಾ ಕಡೆಯಿಂದ 1,000ಕ್ಕೂ ಅಧಿಕ ಪೊಲೀಸರು, 20ಕ್ಕೂ ಅಧಿಕ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿದ್ದು, ವ್ಯಾಪಕ ಬಂದೋಬಸ್ತ್ನಲ್ಲಿ ತೊಡಗಿದ್ದಾರೆ ಎಂದು ವಿವರಿಸಿದರು. ಹಿರಿಯ ಅಧಿಕಾರಿಗಳು ಕೂಡ ಬಂಟ್ವಾಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು. ಅನಿವಾರ್ಯವಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಸಿದರು.
Related Articles
ಮಂಗಳೂರು: ಶರತ್ ಮಡಿವಾಳ ಸಾವಿನ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ ಮಾತ್ರವಲ್ಲದೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿಯೂ ವ್ಯಾಪಕ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ. ಒಟ್ಟು 3,000ಕ್ಕೂ ಮಿಕ್ಕಿ ಪೊಲೀಸರನ್ನು ನಿಯೋಜಿಸಲಾಗಿದೆ.
Advertisement
ಹೊರ ಜಿಲ್ಲೆಗಳಿಂದ ಪೊಲೀಸರನ್ನು ಮತ್ತು ಕೆ.ಎಸ್.ಆರ್.ಪಿ. ಪಡೆಯನ್ನು ಕರೆಸಲಾಗಿದೆ. ಜಿಲ್ಲಾ ಪೊಲೀಸ್‌ನ ನಾಲ್ಕು ತಾಲೂಕುಗಳಲ್ಲಿ ಜಿಲ್ಲೆಯ ಪೊಲೀಸರ ಹೊರತಾಗಿ ಹೆಚ್ಚುವರಿಯಾಗಿ 1,000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸ್ಥಳೀಯ ಪೊಲೀಸರ ಹೊರತಾಗಿ 10 ಕೆಎಸ್‌ಆರ್‌ಪಿ ಪಡೆ ಮತ್ತು ಹೊರ ಜಿಲ್ಲೆಗಳ 300ರಷ್ಟು ಪೊಲೀಸರು ಸೇರಿದಂತೆ ಒಟ್ಟು ಸುಮಾರು 2000 ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ.