Advertisement
ದಂಡ ತೆರಲು ತಪ್ಪಿದರೆ ಮತ್ತೆ 6 ತಿಂಗಳ ಕಠಿನ ಶಿಕ್ಷೆ ಅನುಭವಿಸಬೇಕು. ದಂಡದ ಮೊತ್ತದಲ್ಲಿ 7,500 ರೂ.ಗಳನ್ನು ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ತಿಳಿಸಲಾಗಿದೆ. ಚಂದ್ರಶೇಖರ್ ಪೈಂಟಿಂಗ್ ಕೆಲಸ ಮಾಡುತ್ತಿದ್ದು, ಈ ಹಿಂದೆ ಅಸೈಗೋಳಿಯ ಕಕ್ಕೆಮಜಲಿನಲ್ಲಿ ವಾಸವಾಗಿದ್ದ ಸಂದರ್ಭ 2016ರ ಆ.23ರಂದು ಟಿ.ವಿ. ನೋಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಅಶೋಕ್ ಆರೋಪ ಪಟ್ಟಿ ಸಲ್ಲಿಸಿದ್ದರು. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ವೆಂಕಟರಮಣ ಸ್ವಾಮಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು. 15 ಸಾಕ್ಷ್ಯಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು. Advertisement
ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ: 10 ವರ್ಷ ಕಠಿನ ಶಿಕ್ಷೆ
11:19 AM Dec 16, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.