Advertisement

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

08:04 AM Apr 25, 2024 | Team Udayavani |

ಉಪ್ಪಿನಂಗಡಿ: ಸ್ಲೀಪರ್ ಕೋಚ್‌ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಅದೇ ಬಸ್ಸಿನಲ್ಲಿದ್ದ ಅನ್ಯಕೋಮಿನ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದು, ವಿದ್ಯಾರ್ಥಿನಿಯ ಪ್ರತಿರೋಧದ ನಡುವೆ ಆರೋಪಿಯು ಬಸ್ಸಿನಿಂದ ಜಿಗಿದು ಪರಾರಿಯಾದ ಘಟನೆಗೆ ಸಂಭವಿಸಿದೆ.

Advertisement

ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್‌ ಡಿಸೈನರ್‌ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾೖಲ ಗ್ರಾಮದ ಮಹಮ್ಮದ್‌ ಅಝೀಮ್‌ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾ
ನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಧೈರ್ಯಕ್ಕೆ ಶ್ಲಾಘನೆ
ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಪೊಲೀಸರಿಗೊಪ್ಪಿಸಲು ಯತ್ನಿಸಿದ ವಿದ್ಯಾರ್ಥಿನಿಯ ನಡೆಯನ್ನು ಸಹ ಪ್ರಯಾಣಿಕರರು ಶ್ಲಾಘಿಸಿದ್ದಾರೆ. ಆರೋಪಿ ಕಿಟಕಿಯಿಂದ ಜಿಗಿದು ಪರಾರಿಯಾದ ಬಳಿಕ ವಿದ್ಯಾರ್ಥಿನಿ ಬಳಿಕ ತನ್ನ ಹೆತ್ತವರೊಂದಿಗೆ ಉಪ್ಪಿನಂಗಡಿ ಠಾಣೆಗೆ ಬಂದು ಲಿಖೀತ ದೂರು ಸಲ್ಲಿಸಿದ್ದರು.

Advertisement

ಪೊಲೀಸ್‌ ಎಚ್ಚರಿಕೆ
ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯದ ಘಟನಾವಳಿ ಜಾಲತಾಣಗಳಲ್ಲಿ ಹರಿದಾಡತೊಡಗಿದಂತೆ ಎಚ್ಚೆತ್ತ ಪೊಲೀಸ್‌ ಅಧಿಕಾರಿಗಳು ಈ ಘಟನೆಯನ್ನು ಬಳಸಿಕೊಂಡು ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಚುನಾವಣ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದೂ, ಸುಳ್ಳು ಸುದ್ದಿ
ಯಿಂದ ಸಾಮಾಜಿಕ ಸ್ವಾಸ್ಥ್ಯ ಕೆಡೆಸುವುದರಿಂದ ಅಂತಹವರ ವಿರುದ್ಧಕ್ರಮ ಜರಗಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಧೈರ್ಯಕ್ಕೆ ಡಾ| ಭಟ್‌ ಮೆಚ್ಚುಗೆ
ಬಂಟ್ವಾಳ: ಸಂತ್ರಸ್ತ ವಿದ್ಯಾರ್ಥಿನಿಯ ಮನೆಗೆ ಬುಧವಾರ ಸಂಜೆ ಆರ್‌ಎಸ್‌ಎಸ್‌ ಮುಂದಾಳು ಡಾ| ಪ್ರಭಾಕರ ಭಟ್‌ ಅವರು ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಪ್ರಕರಣವನ್ನು ಎದುರಿಸಿದ ಯುವತಿಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.

ಇದೊಂದು ಆಘಾತಕಾರಿ ಘಟನೆಯಾಗಿದ್ದು, ಇಂತಹ ಪ್ರಕರಣಗಳು ನಿರಂತರವಾಗಿ ಮರುಕಳಿಸುತ್ತಿವೆ. ಸಾಮಾನ್ಯ ಮುಸ್ಲಿಮರಂತೆ ಕಂಡರೂ ಭಯೋತ್ಪಾದಕರ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಅನಾಚಾರಕ್ಕೆ ಮುಂದಾಗುತ್ತಿದೆ. ಈ ಪ್ರಕರಣವನ್ನು ಯುವತಿ ಧೈರ್ಯವಾಗಿ ಎದುರಿಸಿದ್ದು, ಎಲ್ಲರಲ್ಲೂ ಕೂಡ ಇಂತಹ ಧೈರ್ಯ ಬರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next