Advertisement

ಜೆಎನ್‌ಯು ಮೇಲೆ ದಾಳಿ ಎಸ್‌ಎಫ್ಐ ಪ್ರತಿಭಟನೆ

01:29 PM Jan 07, 2020 | Suhan S |

ಹಾಸನ: ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್ಐ) ಹಾಸನ ಜಿಲ್ಲಾ ಶಾಖೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಹಾಸ್ಟೆಲ್‌ಗೆ ನುಗ್ಗಿ ಹಲ್ಲೆ: ಭಾನುವಾರ ರಾತ್ರಿ ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಎಬಿವಿಪಿ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿರುವುದು ವಿಶ್ವವಿದಾಲಯಗಳ ವಿದ್ಯಾರ್ಥಿ ಮತ್ತು ಅಧ್ಯಾಪಕರ ಪ್ರಜಾ ಸತ್ತಾತ್ಮಕ ಹಕ್ಕುಗಳನ್ನು ನಾಶಪಡಿಸುವ ಪ್ರಯತ್ನವಾಗಿದೆ. ಖಂಡನೀಯ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಯವರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಾಧ್ಯಾಪಕರ ಮೇಲೆ ಹಲ್ಲೆ: ಜೆಎನ್‌ ಯುನಲ್ಲಿ ಕಳೆದ ತಿಂಗಳಿನಿಂದ ಶುಲ್ಕ ಹೇರಿಕೆ, ಸೌಲಭ್ಯ ಕಡಿತ ಮಾಡಿರು ವುದನ್ನು ಖಂಡಿಸಿ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಪ್ರಗತಿಪರ ಸಂಘಟನೆಯ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದರು. ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಹಲವಾರು ಪ್ರಾಧ್ಯಾಪಕರು ಧರಣಿ ನಡೆಸುತ್ತಿದ್ದರು. ಈ ಹೋರಾಟವನ್ನು ಹತ್ತಿಕ್ಕಲು ಜೆಎನ್‌ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಹಾಗೂ ಎಸ್‌ಎಫ್ಐ ಮುಖಂಡರಾದ ಆಯಿಶಾ ಘೋಷ್‌ ಹಾಗೂ ಹಲವು ಪ್ರಾಧ್ಯಾಪಕರ ಮೇಲೆ ಗೂಂಡಾಗಳು ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ದೊಣ್ಣೆ ಮತ್ತಿತರ ಮಾರಕಾಸ್ತ್ರಗಳಿಂದ  ಥಳಿಸಿದ್ದಾರೆ. ವಿದ್ಯಾರ್ಥಿಗಳ ನ್ಯಾಯ ಯುತ ಹೋರಾಟವನ್ನು ಹತ್ತಿಕ್ಕಲು ಗೂಂಡಾಗಳು ಮಾಡುತ್ತಿರುವ ಕ್ರೌರ್ಯ ಖಂಡನೀಯ ಎಂದರು.

ನ್ಯಾಯ ಒದಗಿಸಿ: ದೆಹಲಿಯ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರ ಗೃಹ ಇಲಾಖೆ ಹಾಗೂ ವಿವಿ ಕುಲಪತಿಗಳು ನಿರ್ಲಕ್ಷ್ಯ ಹಾಗೂ ವಿವಿ ಮೇಲೆ ಕೇಂದ್ರ ಸರ್ಕಾರ ಈ ರೀತಿಯ ಪ್ರಾಯೋಜಿತ ದಾಳಿಯನ್ನು ಎಸ್‌ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಸೂಕ್ತ ತನಿಖೆ ನಡೆಸಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸ ಬೇಕೆಂದು ಪ್ರತಿಭಟನಾಕಾರರು ಆಗ್ರಹಪಡಿಸಿದರು.

ಎಸ್‌ಎಫ್ಐ ಜಿಲ್ಲಾಧ್ಯಕ್ಷೆ ಆಶಾ, ಸಹ ಕಾರ್ಯದರ್ಶಿ ವಿವೇಕ್‌ ಹಾಗೂ ಮುಖಂಡ ರಾದ ರಕ್ಷಿತಾ, ಸೌಂದರ್ಯ, ಕವನ, ಗಗನ್‌, ಸುಧಾರಾಣಿ ಹಾಗೂ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ನವೀನ್‌ ಕುಮಾರ್‌, ಕಾರ್ಯದರ್ಶಿ ವಸಂತ್‌ ಕುಮಾರ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next