ಮಂಗಳೂರು: ಸಾಮಾಜಿಕ ತಾಣದಲ್ಲಿ ಎಸ್‌ಎಫ್ಐ ಸಂಘಟನೆಗೆ ಸೇರಿದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
Advertisement
ಬೆಳ್ತಂಗಡಿಯ ಹರೀಶ್ ಕಕ್ಕುಂಜೆ ಎಂಬಾತ ಬಂಧಿತನಾಗಿದ್ದು, ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರಿನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಬಂಧಿತ ಹರೀಶ್ ಅನ್ಯಕೋಮಿನ ಯುವಕ ರೊಂದಿಗೆ ಫೋಟೋ ತೆಗೆಸಿಕೊಂಡಿರುವುದಕ್ಕೆ ಎಸ್‌ಎಫ್ಐ ಜಿಲ್ಲಾ ಕಾರ್ಯದರ್ಶಿ ಮಾಧುರಿ ಅವರಿಗೆ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಕರಣ ವೂ ದಾಖಲಾಗಿತ್ತು.
ಕೋಮು ಸೂಕ್ಷ್ಮ ದಕ್ಷಿಣ ಕನ್ನಡದಲ್ಲಿ ಸಾಮಾಜಿಕ ತಾಣಗಳ ಮೇಲೂ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ.