Advertisement

ಶಾದಿಭಾಗ್ಯ ಸ್ಥಗಿತ? ಹೊಸದಾಗಿ ಅರ್ಜಿ ಸ್ವೀಕರಿಸದಿರಲು ಆದೇಶ

11:10 AM Mar 08, 2020 | Sriram |

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಶಾದಿಭಾಗ್ಯ ಯೋಜನೆ ಸ್ಥಗಿತಗೊಳಿಸುವ ಮುನ್ಸೂಚನೆ ದೊರೆತಿದ್ದು, ಅರ್ಜಿ ಸ್ವೀಕಾರ ಮಾಡದಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಆದೇಶ ಹೊರಡಿಸಿದೆ.

Advertisement

ಸರ್ಕಾರದ ಪತ್ರದನ್ವಯ 2020-21 ನೇ ಸಾಲಿನ ಬಜೆಟ್‌ನಲ್ಲಿ ಬಿದಾಯಿ ಯೋಜನೆಯಡಿ ಆರ್ಥಿಕ ಇಲಾಖೆಯು ಅನುದಾನ ನಿಗದಿಪಡಿಸದೇ ಇರುವುದರಿಂದ ಹೊಸ ಅರ್ಜಿಗಳ ಸ್ವೀಕೃತಿ ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವುದು ಎಂದು ಸೂಚಿಸಲಾಗಿರುತ್ತದೆ.

ಆದ್ರಿಂದ ಸದರಿ ಯೋಜನೆಯಡಿ ಅರ್ಜಿಗಳ ಸ್ವೀಕಾರ ತಕ್ಷಣ ನಿಲ್ಲಿಸುವುದು ಹಾಗೂ ಸದರಿ ಯೋಜನೆಯಡಿ ಮಂಜೂರು ಮಾಡಲು ಬಾಕಿ ಇರುವ ಅರ್ಹ ಅರ್ಜಿಗಳ ಮಾಹಿತಿಯನನ್ನು ಮಾರ್ಚ್‌ 9 ರೊಳಗೆ ಕಡ್ಡಾಯವಾಗಿ ನಿರ್ದೇಶನಾಲಯಕ್ಕೆ ಸಲ್ಲಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಕ್ರೋಶ
ಬಿದಾಯಿ ಯೋಜನೆ ಅರ್ಜಿಗಳ ಸ್ವೀಕಾರ ಮಾಡಬಾರದು ಎಂದು ಆದೇಶ ಹೊರಡಿಸಿರುವ ಬಗ್ಗೆ ಮಾಜಿ ಸಚಿವ ಜಮೀರ್‌ ಅಹಮದ್‌ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸರ್ಕಾರ ಬಡ ಮುಸ್ಲಿಂ ಕುಟುಂಬಗಳಿಗೆ ದ್ರೋಹ ಮಾಡಿದೆ. ಆರ್ಥಿಕವಾಗಿ ಶಕ್ತಿ ಇಲ್ಲದ ಕುಟುಂಬಗಳ ಹೆಣ್ಣು ಮಕ್ಕಳಿಗೆ ಮದುವೆಗೆ ನೀಡುತ್ತಿದ್ದ ನೆರವು ಕಸಿದುಕೊಂಡಿದೆ. ಇದರ ಬಗ್ಗೆ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಶುಕ್ರವಾರವಷ್ಟೇ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಸಮುದಾಯದ ಶಾಸಕರು ಶಾದಿಭಾಗ್ಯ ಯೋಜನೆಗೆ ಬಜೆಟ್‌ನಲ್ಲಿ ಹಣ ಇಟ್ಟಿಲ್ಲ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಣ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿಯವರ ಬಳಿ ನಿಯೋಗ ತೆರಳಲು ತೀರ್ಮಾನಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next