Advertisement

ರಸ್ತೆ ಅಪಘಾತ :ಬಾಲಿವುಡ್‌ ನಟಿ ಶಬಾನಾ ಅಜ್ಮಿ ಆರೋಗ್ಯ ಸ್ಥಿರ

10:02 AM Jan 20, 2020 | sudhir |

ಮುಂಬೈ: ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಿಂದ ಗಾಯಗೊಂಡಿರುವ ಬಾಲಿವುಡ್‌ ನಟಿ ಶಬಾನಾ ಅಜ್ಮಿ(69) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿನ ಕೋಕಿಲಾಬೆನ್‌ ಅಂಬಾನಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯಕ್ಕೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯಬಿದ್ದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇದೇ ವೇಳೆ, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದ ಮೇರೆಗೆ ಅವರ ಕಾರು ಚಾಲಕ ಕಮಲೇಶ್‌ ಕಾಮತ್‌(38) ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಪ ಪ್ರಮಾಣದಲ್ಲಿ ಗಾಯಗೊಂಡಿರುವ ಕಾಮತ್‌, ಮತ್ತೂಂದು ವಾಹನವನ್ನು ಓವರ್‌ಟೇಕ್‌ ಮಾಡಲು ಹೋದಾಗ ಮುಂದಿನಿಂದ ಬರುತ್ತಿದ್ದ ಟ್ರಕ್‌ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next