Advertisement

ಅ.16ರಿಂದ 5 ದಿನ ತೆರೆಯಲಿದೆ ಶಬರಿಮಲೆ: ಒಂದು ಬಾರಿ 250 ಮಂದಿ ಭಕ್ತರಿಗೆ ಮಾತ್ರ ಅವಕಾಶ

02:50 PM Oct 10, 2020 | keerthan |

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಅ.16ರಿಂದ ಐದು ದಿನಗಳ ಕಾಲ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ಬಾರಿ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

Advertisement

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗ‌ಳನ್ನು ಪೂರ್ತಿಗೊಳಿಸಲಾಗಿದೆ. ಕೇರಳ ಸಶಸ್ತ್ರ ಪೊಲೀಸ್‌ ಪಡೆ (ಕೆಎಪಿ)ಯ ಐದನೇ ಬೆಟಾಲಿಯನ್‌ ಕಮಾಂಡೆಂಟ್‌ ಕೆ. ರಾಧಾಕೃಷ್ಣನ್‌ ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.

ವಡಶ್ಶೇರಿಕ್ಕರ ಮತ್ತು ಎರುಮಲೆ ಮಾರ್ಗಗಳನ್ನು ಹೊರತುಪಡಿಸಿ ಇತರ ಎಲ್ಲಾ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ:ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸಲು ಆಗ್ರಹ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು. ಅಲ್ಲಿ ನೆಗೆಟಿವ್ ವರದಿಯಾದರೆ ಮಾತ್ರ ಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನಕ್ಕೆ ಈ ಬಾರಿ ಅವಕಾಶ ಕಲ್ಪಿಸಲಾಗಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next