Advertisement

Health update; ಶಾರುಖ್ ಖಾನ್ ಕ್ಷೇಮವಾಗಿದ್ದಾರೆ ಎಂದ ಪೂಜಾ ದಾದ್ಲಾನಿ

07:25 PM May 23, 2024 | Team Udayavani |

ಅಹಮದಾಬಾದ್‌: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆದ ಒಂದು ದಿನದ ನಂತರ ಕ್ಷೇಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಗುರುವಾರ ಹೇಳಿದ್ದಾರೆ.

Advertisement

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದಲ್ಲಿ ಭಾಗವಹಿಸಿದ್ದ ಶಾರುಖ್ ಅವರನ್ನು ಬುಧವಾರ ಹೀಟ್ ಸ್ಟ್ರೋಕ್‌ನಿಂದಾಗಿ ಅಹಮದಾಬಾದ್‌ನ ಮಲ್ಟಿ-ಸ್ಪೆಷಾಲಿಟಿ ಕೆ ಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಖಾನ್ ಅವರ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗಾಗಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಕಾಳಜಿಗೆ ಧನ್ಯವಾದಗಳು’ ಎಂದು ದಾದ್ಲಾನಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 45.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬುಧವಾರ 45.9 ಡಿಗ್ರಿಗೆ ಏರಿಕೆಯಾಗಿತ್ತು. ಕ್ವಾಲಿಫೈಯರ್ 1 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೆಕೆಆರ್ ಎಂಟು ವಿಕೆಟ್ ಗಳ ಭರ್ಜರಿ ಜಯದೊಂದಿಗೆ ನಾಲ್ಕನೇ ಐಪಿಎಲ್ ಫೈನಲ್ ಪ್ರವೇಶಿಸಿತ್ತು. ತಂಡದ ವಿಜಯೋತ್ಸವವನ್ನು ಮಕ್ಕಳಾದ ಸುಹಾನಾ ಖಾನ್ ಮತ್ತು ಅಬ್‌ರಾಮ್ ಖಾನ್ ಅವರ ಜತೆಯಲ್ಲಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಮತ್ತು ಆಟಗಾರರಿಗೆ ಶುಭಾಶಯ ಕೋರಿ ಸಂಭ್ರಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next