Advertisement

ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ಪ್ರಕರಣ: ಶಾರುಖ್ ಪುತ್ರ ಸೇರಿ ಮೂವರ ಬಂಧನ

04:43 PM Oct 03, 2021 | Team Udayavani |

ಮುಂಬೈ: ಮಹಾರಾಷ್ಟ್ರದ ಮುಂಬೈ ಕರಾವಳಿ ತೀರದಲ್ಲಿ ಕ್ರೂಸ್ ಶಿಪ್ ಒಂದರಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ ಮೂವರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸತತ ವಿಚಾರಣೆಯ ಬಳಿಕ ಮೂವರನ್ನು ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ.

Advertisement

ಐಷಾರಾಮಿ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಂಡ 8 ಮಂದಿಯನ್ನು ವಶಕ್ಕೆ ಪಡೆದಿದ್ದು ಅವರ ಹೆಸರುಗಳನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಇಬ್ಬರು ಯುವತಿಯರೂ ಸೇರಿದ್ದಾರೆ. ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ ಎಂಬ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.

ಇದನ್ನೂ ಓದಿ:ಪಂಜಾಬ್ ನಲ್ಲಿ ದಲಿತ ಸಿಎಂ ಆಯ್ಕೆ ಕಾಂಗ್ರೆಸ್ ನ ದಿಟ್ಟ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

ವಶಕ್ಕೆ ಪಡೆದವರಿಂದ ಎಂಡಿಎಂಎ, ಎಸ್ಕೆಸಿ, ಕೊಕೈನ್, ಎಂಡಿ ಮತ್ತು ಚರಸ್ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿ ಕಳೆದ ರಾತ್ರಿ ನಡೆದಿದೆ. ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಸಂಸ್ಥೆ ಆಯೋಜಕರ ವಿರುದ್ಧ ಎಫ್ ಐಆರ್ ದಾಖಲಿಸಿದೆ.

ಸಮುದ್ರ ಮಧ್ಯೆ ಹಡಗಿನಲ್ಲಿ ನಟರು, ಉದ್ಯಮಿಗಳು ಮತ್ತು ಶ್ರೀಮಂತರ ಮಕ್ಕಳು ಸೇರಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಎನ್ ಸಿಬಿಗೆ ಮಾಹಿತಿ ಸಿಕ್ಕಿತು. ಅದರ ಜಾಡು ಹಿಡಿದು ಕಳೆದ ಎರಡು ವಾರಗಳಿಂದ ಎನ್ ಸಿಬಿ ತೀವ್ರ ವಿಚಾರಣೆ ನಡೆಸಿ ಜಾಡು ಹಿಡಿದು ಹೊರಟಿತ್ತು. ಪ್ರಯಾಣಿಕರ ರೂಪದಲ್ಲಿ ಹಡಗೇರಿದ್ದ ತಂಡ ರೇವ್ ಪಾರ್ಟಿ ಆರಂಭವಾಗುತ್ತಿದ್ದಂತೆ ದಾಳಿ ನಡೆಸಿತ್ತು.

Advertisement

ಕಾರ್ಯಾಚರಣೆ ವೇಳೆ ಶಂಕಿತರನ್ನು ತೀವ್ರ ಶೋಧ ನಡೆಸಿದಾಗ ವಿವಿಧ ಬಟ್ಟೆಗಳಲ್ಲಿ, ಶೂ, ಒಳ ಉಡುಪುಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟಿದ್ದು ಬೆಳಕಿಗೆ ಬಂದು ವಶಪಡಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next