ಶಹಾಬಾದ: ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ್ ಉದ್ಯಮದ ಮೂಲಕ ತನ್ನದೇ ಛಾಪು ಮೂಡಿಸಿರುವ ಶಹಾಬಾದ ನಗರದಲ್ಲಿ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಷ್ಟು ಕಾವಳ ಉಂಟಾಗಿ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗುತ್ತಿದೆ.
Advertisement
ನಗರದಲ್ಲಿ ಪ್ರತಿದಿನ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅಸದೃಶ್ಯವಾಗಿ ಕಾಣುತ್ತಿದ್ದಾರೆ. ಪ್ರತಿನಿತ್ಯ ವಾಯುವಿಹಾರಕ್ಕೆ ಹೋಗುವ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ಈ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಮೊಬೈಲ್ ಕ್ಯಾಮರಾದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದ್ದಾರೆ.