Advertisement

ಶಹಾಬಾದ: ವ್ಯಾಪಾರ-ವಹಿವಾಟು ಸುಗಮ

11:58 AM Nov 10, 2019 | Suhan S |

ಶಹಾಬಾದ: ಐತಿಹಾಸಿಕ ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ, ನಗರದಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ನಮಗೆ ಯಾವುದೇ ಸಂಬಂಧವಿಲ್ಲದಂತೆ ವ್ಯಾಪಾರ, ವಹಿವಾಟಿನಲ್ಲಿ ತಲ್ಲೀನರಾಗಿದ್ದರು.

Advertisement

ಪೊಲೀಸ್‌ ಇಲಾಖೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದರು. ಅಯೋಧ್ಯದ ತೀಪು ಹೊರಬಿಳುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7ಗಂಟೆಗೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು ನಗರದ ಮುಖ್ಯ ಭಾಗಗಳಲ್ಲಿ ಪಥಸಂಚಲನ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದರು.

ಅಲ್ಲದೇ ಆಟೋದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ನ.9ರಿಂದ 11ವರೆಗೆ ಸಿಆರ್‌ಪಿಸಿ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಯಿತು. ಈ ಅವಧಿಯಲ್ಲಿ ಪಟಾಕಿ, ಸಿಡಿಮದ್ದು ಉಪಯೋಗ, ಮಾರಾಟ ಹಾಗೂ ಸಾಗಾಟ, ಮೆರವಣಿಗೆ, ಬೈಕ್‌ ರ್ಯಾಲಿ, ವಾಹನಗಳಲ್ಲಿ ಧ್ವನಿ ವರ್ಧಕ ಬಳಕೆ, ಗುಂಪು ಸೇರುವುದು ನಿಷೇಧಿಸಲಾಗಿದೆ.

ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಬಂದು ಮರಳಿ ಮನೆಗೆ ತೆರಳಿದರು. ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next