Advertisement

ಅನುದಾನ ಸದ್ಬಳಕೆಗೆ ಸಲಹೆ

04:53 PM Jun 16, 2019 | Naveen |

ಶಹಾಪುರ: ಕಳೆದ ಮಾರ್ಚ್‌ನಲ್ಲಿ ಅನುಮೋದಿಸಲಾದ ಕ್ರಿಯಾ ಯೋಜನೆಗಳ ಅನ್ವಯ ವಿವಿಧ ಇಲಾಖೆಗಳಲ್ಲಿ ಕೈಗೊಂಡ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೆ ಬಿಡುಗಡೆಯಾದ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಬಸವಂತರಡ್ಡಿ ಸಾಹು ಹತ್ತಿಗೂಡೂರ ಸೂಚಿಸಿದರು.

Advertisement

ನಗರದ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮಾಭಿವೃದ್ಧಿಗೆ ಅಧಿಕಾರಿಗಳು ಸಹಕಾರ ನೀಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು.

ಅಲ್ಲದೆ ಕಳೆದ 2016-17ನೇ ಸಾಲಿನಲ್ಲಿ ಆಯ್ಕೆಯಾದ ಗೊಂಚಲು ಗ್ರಾಮ ಯೋಜನೆ ಫಲಾನುಭವಿಗಳಿಗೆ ಇದುವರೆಗೂ ಸಹಾಯಧನ ನೀಡದೆ ಸ್ಥಳೀಯ ಬ್ಯಾಂಕ್‌ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಈ ಕುರಿತು ಪಶು ಸಂಗೋಪನಾ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ತಂದು ಲೀಡ್‌ ಬ್ಯಾಂಕ್‌ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಸೂಚಿಸಿದರು.

Advertisement

ಸರ್ಕಾರಿ ಯೋಜನೆಗಳು ಹಳ್ಳ ಹಿಡಿಯುವದಕ್ಕೆ ಬ್ಯಾಂಕ್‌ ಅಧಿಕಾರಿಗಳ ಕಾರ್ಯವೈಖರಿಯೇ ಕಾರಣ. ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸರ್ಕಾರಿ ಆದೇಶದಂತೆ ನಿರ್ದೇಶನ ನೀಡಬೇಕು ಎಂದು ಹೇಳಿದರು.

ಗೋನಾಲ ಗ್ರಾಮದಲ್ಲಿ ಖಾಸಗಿಯವರ ಜಮೀನೊಂದರಲ್ಲಿ ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದೆ. ಕೂಡಲೇ ಅದನ್ನು ತೆರವುಗೊಳಿಸಬೇಕು. ಈಗಾಗಲೇ ನಿರ್ದೇಶನ ನೀಡಿದರೂ ಗಣನೆಗೆ ತೆಗೆದುಕೊಳ್ಳದ ಲೋಕೋಪಯೋಗಿ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಕಾರ್ಯ ನಿರ್ವಾಹಕ ಅಧಿಕಾರಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣಕ್ಕಾಗಿ ಲೇಔಟ್‌ಗಳನ್ನು ಮಂಜೂರಿ ಮಾಡುವಲ್ಲಿ ಸರ್ಕಾರ ನೀಡಿದ ನಿರ್ದೇಶನ ಪಾಲಿಸಬೇಕು. ಲೇಔಟ್ ನಿರ್ಮಾಣಕ್ಕೆ ಅಂಗನವಾಡಿ, ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ ಮತ್ತು ರುದ್ರಭೂಮಿಗಾಗಿ ಸ್ಥಳಾವಕಾಶ ಕಲ್ಪಿಸುವ ಮೂಲಕ ಲೇಔಟ್‌ಗಳಿಗೆ ಪರವಾನಿಗೆ ನೀಡಬೇಕು ಎಂದು ಸಲಹೆ ನೀಡಿದರು.

ಜೆಸ್ಕಾಂ ಎಇಇ ಶಾಂತಪ್ಪ ಪೂಜಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಹುತಪ್ಪ ಹವಾಲ್ದಾರ್‌, ಬಿಸಿಊಟ ಯೋಜನೆ ಸಹಾಯಕ ನಿರ್ದೇಶಕ ಸೂರ್ಯವಂಶಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next