Advertisement

ಶಹಾಪುರ: ಕೋವಿಡ್‌ ಆಸ್ಪತ್ರೆ ಸ್ಥಾಪನೆಗೆ ಸ್ಥಳ ಪರಿಶೀಲನೆ

06:33 AM May 26, 2020 | Suhan S |

ಶಹಾಪುರ: ದಿನೇದಿನೆ ನೊವೆಲ್‌ ಕೋವಿಡ್‌ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಗದಿತ ಆಸ್ಪತ್ರೆ ಸ್ಥಾಪಿಸುವ ಸಲುವಾಗಿ ಸೋಮವಾರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ನಗರಕ್ಕೆ ಭೇಟಿ ನೀಡಿ ವಿವಿಧ ಸ್ಥಳಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂದು ತಹಶೀಲ್ದಾರ್‌ ಜಗನ್ನಾಥರಡ್ಡಿ ತಿಳಿಸಿದ್ದಾರೆ.

Advertisement

ನಗರದ ಬಾಪುಗೌಡ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ಮಿಸಿರುವ 20 ಕೋಣೆಗಳುಳ್ಳ ಪರಿಶಿಷ್ಟ ಜಾತಿ ವಸತಿನಿಲಯ ಸೇರಿದಂತೆ ತಾಲೂಕಿನ ಹೋತಪೇಟ ನವೋದಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಮೂಲಸೌಲಭ್ಯ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ ಪರಿಶಿಷ್ಟ ಜಾತಿ ವಸತಿ ನಿಲಯದ ನೂತನ ಕಟ್ಟಡಗಳ ಪ್ರತಿ ಕೋಣೆಯಲ್ಲಿ ಎರಡು ಬೆಡ್‌ ಕಾಟ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ನಂತರ ಕನ್ಯಾಕೋಳೂರ ರಸ್ತೆಯಲ್ಲಿರುವ ಬಿಸಿಎಂ ವಸತಿ ನಿಲಯಕ್ಕೆ ಭೇಟಿ ನೀಡಿ ಕ್ವಾರಂಟೈನ್‌ ಕೇಂದ್ರದಲ್ಲಿ ಸಮರ್ಪಕ ಸೌಲಭ್ಯ ಕಲ್ಪಿಸುವಂತೆ, ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್‌ ಜಗನ್ನಾಥರಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ| ರಮೇಶ ಗುತ್ತೇದಾರ, ಪೌರಾಯುಕ್ತ ಬಸವರಾಜ ಶಿವಪೂಜೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.