Advertisement

ಸಂತ್ರಸ್ತರ ಸಮಸ್ಯೆ ಆಲಿಸಿದ ರಾಜುಗೌಡ

04:04 PM Aug 14, 2019 | Naveen |

ಸುರಪುರ: ನಗರದ ಎಪಿಎಂಸಿಯಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಸೋಮವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಬಟ್ಟೆ, ಬೆಡ್‌ಸೀಟ್ ಮತ್ತಿತರ ವಸ್ತುಗಳನ್ನು ವಿತರಿಸಿದರು.

Advertisement

ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ ನಂತರದ ಮಾತನಾಡಿದ ಅವರು, ನೆರೆ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದೆ. ಇದರಿಂದ ನದಿ ಪ್ರವಾಹದಲ್ಲಿ ಹರಿಯುವಿನ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿಯುವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಹೊರಹರಿಯುವಿನ ಪ್ರಮಾಣದಲ್ಲಿ ಅಧಿಕವಾಗಲಿದೆ. ಆದ್ದರಿಂದ ನದಿ ನೀರಿನ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಹೀಗಾಗಿ ಅಪಾರ ಬೆಳೆ ನಷ್ಟವಾಗಿದೆ. ಆದ್ದರಿಂದ ರೈತರ ವರದಿ ತರಿಸಿಕೊಂಡು ಸರಕಾರಕ್ಕೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ನದಿ ತೀರದ ತಿಂಥಿಣಿ, ದೇವಪುರ, ಗೆದ್ದಲಮರಿ, ಶೆಳ್ಳಗಿ, ಮುಷ್ಠಳ್ಳಿ, ಸೂಗೂರು, ಚೌಡೇಶ್ವರಹಾಳ ಸೇರಿದಂತೆ ವಿವಿಧ ಗ್ರಾಮಗಳ ಕೊನೆ ಭಾಗದಲ್ಲಿರುವ ವಾರ್ಡ್‌ಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಹ ಇಳಿಮುಖವಾದ ತಕ್ಷಣ ನೆರೆ ಸಂತ್ರಸ್ತರ ಜೀವನವನ್ನು ಸಹಜ ಸ್ಥಿತಿಗೆ ತರಲು ಸಾಧ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮನೆ ಕಳೆದುಕೊಂಡುವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಪ್ರವಾಹ ಇಳಿಯುವರೆಗೆ ಯಾರು ಗಂಜಿ ಕೇಂದ್ರ ಬಿಟ್ಟು ಕದಲಬಾರದು. ನಿಮ್ಮ ನೆರವಿಗೆ ಸರಕಾರವಿದೆ. ಬೇಕಾದ ನೆರವು ನೀಡಲು ನಾನಿದ್ದೇನೆ. ಹೆದರಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next