Advertisement

ಕೋವಿಡ್ ತಡೆಗೆ ಮುಂಜಾಗ್ರತೆ ವಹಿಸಿ: ಒಡೆಯರ್‌ ಸಲಹೆ

12:35 PM Jun 24, 2020 | Naveen |

ಶಹಾಪುರ: ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೋವಿಡ್ ವೈರಸ್‌ ಅಪಾಯಕಾರಿಯಾಗಿದೆ. ಇದರ ತಡೆಗೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಗೋಗಿ ಪೊಲೀಸ್‌ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಹೇಳಿದರು.

Advertisement

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ತಾಲೂಕಿನ ಗೋಗಿ ಗ್ರಾಮದಲ್ಲಿ ಹಮ್ಮಿಕೊಂಡ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್‌ ಮತ್ತು ಮಾಸ್ಕ್ ವಿತರಣೆ ಮತ್ತು ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರು ಮನೆಯಿಂದ ಹೊರಗಡೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಮತ್ತು ಯಾವುದಾದರೂ ವಸ್ತುಗಳನ್ನು ಮುಟ್ಟಿದರೆ ಸ್ಯಾನಿಟೈಸರ್‌ನಿಂದ ಕೈ ತೊಳೆದುಕೊಳ್ಳಬೇಕು. ಮನೆಗೆ ತೆಗೆದುಕೊಂಡು ಬಂದ ವಸ್ತುಗಳನ್ನು ತೊಳೆಯಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಚನ್ನಾರಡ್ಡಿ ಎಂ. ತಂಗಡಗಿ ಮಾತನಾಡಿದರು. ಎನ್ನೆಸ್ಸೆಸ್‌ ಘಟಕ ಅಧಿಕಾರಿ ಡಾ| ರಾಜು ಶಾಮರಾವ್ ಪ್ರಾಸ್ತಾವಿಕ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next