Advertisement

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

07:21 PM Jun 01, 2020 | Naveen |

ಶಹಾಪುರ: ತಾಲೂಕಿನ ಮಕ್ತಾಪುರ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಕೂಡಲೇ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೋತಪೇಟ ಗ್ರಾಪಂ ವ್ಯಾಪ್ತಿಗೆ ಬರುವ ಮಕ್ತಾಪುರ ಸುಮಾರು ಗ್ರಾಮದಲ್ಲಿ 500 ಮನೆಗಳಿವೆ. ಅಂತರ್ಜಲ ಕುಸಿದಿದೆ. ಕೊಳವೆಬಾವಿಯಲ್ಲೂ ಸಮರ್ಪಕ ನೀರು ಬರುತ್ತಿಲ್ಲ. ಹೀಗಾಗಿ ನೀರಿಗಾಗಿ ಪರಿತಪಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಅಲಕ್ಷದಿಂದಾಗಿ ಜನರು ಪರಿತಪಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕುರಿತು ಪಿಡಿಒ ಗಮನಕ್ಕೆ ತಂದರು ಸ್ಪಂದಿಸುತ್ತಿಲ್ಲ ಎಂದು ಗ್ರಾಮದ ಮುಖಂಡ ಚಂದ್ರಪ್ಪ ಪರಮೇಶ್ವರಿ ಆರೋಪಿಸಿದರು. ತಕ್ಷಣ ಗ್ರಾಮಕ್ಕೆ ಕುಡಿಯುವ ನೀರು ಹಾಗೂ ವಿದ್ಯುತ್‌ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next