Advertisement
ನಗರಸಭೆ ಚುನಾವಣೆ ಮುಗಿದು 6 ತಿಂಗಳಾಗಿದೆ. ನಗರಸಭೆಗೆ ಆಯ್ಕೆಯಾದ ಸದಸ್ಯರಿಗೆ ತಾಂತ್ರಿಕ ಕಾರಣದಿಂದ ಇನ್ನೂ ಅಧಿಕಾರ ಸಿಕ್ಕಿಲ್ಲ. ಅಲ್ಲದೇ ಅಧಿಕಾರಿಗಳು ಸ್ವತ್ಛತೆ ಕಡೆಗೆ ಗಮನಹರಿಸಿಲ್ಲ. ನಗರದ ಕೆಲ ಭಾಗದಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಜ್ವರ ಹರಡಿದೆ. ನಗರದ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು ಎರಡು ಮೂರು ದಿನ ನಗರದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಬಳಿಕ ಕೈತೊಳೆದುಕೊಂಡು ಬಿಟ್ಟರು ಎಂಬಂತೆ ಕಾಣುತ್ತಿದೆ. ಸಾಂಕ್ರಾಮಿಕ ರೋಗ, ಡೆಂಘೀ ಮತ್ತು ಚಿಕೂನ್ ಗುನ್ಯಾ ಭೀತಿ ಕಡಿಮೆಯಾಗಿಲ್ಲ.
Related Articles
Advertisement
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸದ ಗೂಡು ಕೆಸರು ಗದ್ದೆಯಾದ ರಸ್ತೆಯಲ್ಲಿಯೇ ದಿನನಿತ್ಯದ ಬದುಕು ಸಾಗಿಸಬೇಕಾಗಿದೆ ಎಂದು ನಾಗರಿಕರು ದೂರಿದ್ದಾರೆ.
ಚಾಮುಂಡೇಶ್ವರಿ ನಗರದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಚರಂಡಿ ನೀರು ಸಂಗ್ರಹವಾಗಿ ಕೆರೆಯಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಾಯಬಣ್ಣ ನಾಶಿ, ಚಾಮುಂಡಿ ಬಡಾವಣೆ ನಗರದ ಹಲವಡೆ ಚರಂಡಿ ಅಸಮರ್ಪಕತೆಯಿಂದ ಕೊಳಚೆ ನೀರು ಸಂಗ್ರಹವಾಗಿ ಗಬ್ಬೆದ್ದು ನರುತ್ತಿದೆ. ನಗರಸಭೆ ಅಧಿಕಾರಿಗಳು ಸ್ವತ್ಛತೆಗೆ ಕ್ರಮ ಕೈಗೊಳ್ಳಬೇಕು. ಅಂಗಡಿ, ಮುಂಗಟ್ಟುಗಳ ಸಹ ಕಸದ ರಾಶಿಯನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಬಡಾವಣೆ ಸ್ವಚ್ಛತೆಗೆ ನಗರಸಭೆ ಆದ್ಯತೆ ನೀಡಬೇಕು.
ನಂದಕುಮಾರ ಚಿಲ್ಲಾಳ,
ನಗರ ವಾಸಿ