Advertisement

2 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ

06:03 PM Mar 05, 2020 | Naveen |

ಶಹಾಪುರ: ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ನೀಡುವ ಸದುದ್ದೇಶದಿಂದ ನಗರದ ಹೊರ ಹೊಲಯದಲ್ಲಿ ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ಒಳ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದ್ದು, ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

Advertisement

ಡಿಗ್ರಿ ಕಾಲೇಜು ಹತ್ತಿರದ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿದ ಅವರು, ಇದೇ ಸಂದರ್ಭದಲ್ಲಿ ನಗರದಲ್ಲಿ ಒಳ ಕ್ರೀಡಾಂಗಣದ ಅಗತ್ಯತೆ ಅರಿತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 2 ಕೋಟಿ ರೂ. ಅನುದಾನ ಮಂಜೂರು ಮಾಡಿಸಲಾಗಿದೆ. ಒಳಾಂಗಣ ಕ್ರೀಡಾಂಗಣದಿಂದ ನಗರದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ ಎಂದರು.

ಶೀಘ್ರದಲ್ಲಿ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಆರಂಭವಾಗಲಿದೆ ಎಂದ ಅವರು, ಅದಕ್ಕಾಗಿ ಸೂಕ್ತ ಸ್ಥಳ ನಿಗದಿ ಪಡಿಸಲಾಗುತ್ತಿದೆ. ನಗರದ ಯುವಕರು ಅಭ್ಯಾಸದ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಖಾಲಿ ಕುಳಿತು ಹಲವು ದುಶ್ಚಟಕ್ಕೆ ಬಲಿ ಆಗುವುದಕ್ಕಿಂತ ಆಸಕ್ತಿಯ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಸಾಧಣೆ ಮಾಡಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next