Advertisement

ಕೋವಿಡ್ ತಡೆಗೆ ನಗರಸಭೆ ಸದಸ್ಯರ ಸಹಕಾರ ಅಗತ್ಯ: ಡಿಸಿ

12:40 PM Jun 11, 2020 | Naveen |

ಶಹಾಪುರ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಲಾಕ್‌ಡೌನ್‌ ಸಡಿಲಿಕೆ ಜತೆಗೆ ಕೋವಿಡ್ ಸೋಂಕು ತಡೆಗೆ ಸರ್ಕಾರ ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊರ ರಾಜ್ಯ, ದೇಶಗಳಿಂದ ಆಗಮಿಸುವ ಜನರ ಪತ್ತೆ ಹಚ್ಚುವಿಕೆಯಲ್ಲಿ ನಗರಸಭೆ ಸದಸ್ಯರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.

Advertisement

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ನಡೆದ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಕಡ್ಡಾಯಗೊಳಿಸಬೇಕಿದೆ. ನಗರದಲ್ಲಿ ಯಾರೊಬ್ಬರೂ ಸಮರ್ಪಕವಾಗಿ ನಿಯಮ ಪಾಲಿಸುತ್ತಿಲ್ಲ. ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಜನತೆ ನಿಯಮ ಪಾಲಿಸುವಂತೆ ಕ್ರಮ ವಹಿಸಬೇಕು. ಅಧಿಕಾರಿಗಳಿಗೆ ನಗರಸಭೆ ಸದಸ್ಯರು ಸಾಥ್‌ ನೀಡಬೇಕು. ಯಾರಾದರೂ ಹೊರ ರಾಜ್ಯ, ದೇಶಗಳಿಂದ ಆಗಮಿಸಿದಲ್ಲಿ ಅವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲು ಮನವೊಲಿಸಬೇಕು. ಸದಸ್ಯರು ಈ ಕುರಿತು ಜನರಲ್ಲಿ ಜಾಗೃತಿಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ಜಗನ್ನಾಥರಡ್ಡಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ಟಿಎಚ್‌ಒ ಡಾ| ರಮೇಶ ಗುತ್ತೇದಾರ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next