Advertisement

ಕ್ವಾರಂಟೈನ್‌ ಕೇಂದ್ರಕ್ಕೆ ಭೇಟಿ

06:40 PM May 15, 2020 | Naveen |

ಶಹಾಪುರ: ನಗರದ ಹೊರ ವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ಥಾಪಿಸಿದ ಕ್ವಾರಂಟೈನ್‌ ಕೇಂದ್ರಕ್ಕೆ ಗುರುವಾರ ಶಾಸಕ ಶರಣಬಸಪ್ಪ ದರ್ಶನಾಪುರ ಭೇಟಿ ನೀಡಿ ಪರಿಶೀಲಿಸಿದರು.

Advertisement

ನಂತರ ಮಾತನಾಡಿದ ಅವರು, ನೆರೆ ರಾಜ್ಯ ಹಾಗೂ ಜಿಲ್ಲೆಯಿಂದ ಆಗಮಿಸಿದ ಸಾವಿರಾರು ಜನ ವಲಸಿಗರನ್ನು ತಾಲೂಕಿನ ಮೂರು ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗಿದೆ. ಕೇಂದ್ರದಲ್ಲಿ ಊಟ, ಕುಡಿಯುವ ನೀರು, ವಸತಿ, ಉಪಹಾರ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಾರ್ಮಿಕರಿಗೆ ಕೇಂದ್ರದಲ್ಲಿ ಏನಾದರೂ ಸಮಸ್ಯೆಯಾಗುತ್ತಿದೆಯೇ ಊಟ ಉಪಚಾರ ಸರಿಯಾಗಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ವಾರಂಟೈನ್‌ ಕೇಂದ್ರದ ಮೇಲ್ವಿಚಾರಕರು, ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ವಸತಿ ಶಾಲೆ, ಬಿಸಿಎಂ ವಸತಿ ಶಾಲೆ ಕೇಂದ್ರಲ್ಲಿ ಕ್ವಾರಂಟೈನ್‌ ಕೇಂದ್ರ ಸ್ಥಾಪಿಸಲಾಗಿದೆ. ವಸತಿ ನಿಲಯದಲ್ಲಿ ಬೆಳಗ್ಗೆ ಮಕ್ಕಳಿಗೆ ಉಪಹಾರ ಸೇರಿದಂತೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡಿದ್ದಾರೆ.

ಪ್ರತಿಯೊಂದು ಕೋಣೆಗೆ ಶುದ್ಧ ಕುಡಿಯುವ ನೀರಿನ ಕ್ಯಾನ್‌ ನೀಡಿದ್ದೇವೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಮೊರಾರ್ಜಿ ಶಾಲೆ ಪ್ರಾಚಾರ್ಯರು ವಿದ್ಯುತ್‌ ಸಮಸ್ಯೆಯಾಗುತ್ತಿದ್ದು, ಸರಿಪಡಿಸುವಂತೆ ಶಾಸಕರ ಗಮನಕ್ಕೆ ತಂದರು. ಈ ಬಗ್ಗೆ ಜೆಸ್ಕಾಂ ಇಂಜಿನಿಯರ್‌ಗೆ ಮಾತನಾಡಿದ ಶಾಸಕರು ಕೂಡಲೇ ಸಮರ್ಪಕವಾಗಿ ವಿದ್ಯುತ್‌ ಪೂರೈಸುವಂತೆ ಸೂಚಿಸಿದರು.
ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ್‌ ಹುಲಕಲ್‌, ನಗರಸಭೆ ಮಾಜಿ ಸದಸ್ಯ ವಸಂತ ಸುರಪುರಕರ್‌, ಜಗದೀಶ ಪತ್ತಾರ ರಂಗಂಪೇಟ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next