Advertisement

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಶಕ್ತಿ ಕಾಯ್ದೆ

07:59 PM Dec 13, 2020 | Suhan S |

ಮುಂಬಯಿ, ಡಿ. 12: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ರಾಜ್ಯ ಸರಕಾರ ಶಕ್ತಿ ಕಾಯ್ದೆಯನ್ನು ಜಾರಿಗೆ ತರುವ ಸಿದ್ಧತೆ ಮಾಡಿಕೊಂಡಿದ್ದು, ಈ ಕಾಯ್ದೆಯ ಪ್ರಸ್ತಾವನೆಯನ್ನು ವಿಧಾನಸಭೆಯಲ್ಲಿ ಅನುಮೋದಿಸಿದ ಬಳಿಕ ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಗೃಹ ಸಚಿವ ಅನಿಲ್‌ ದೇಶ್ಮುಖ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

ಸಾಮಜಿಕ ಮಾಧ್ಯಮಗಳಲ್ಲಿ ಮಹಿಳೆಯರ ಫೋಟೋಗಳನ್ನು ತಪ್ಪಾಗಿ ಪೋಸ್ಟ್ ಮಾಡುವ ಮೂಲಕ ಅವರನ್ನು ಅವಮಾನಿಸಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಅಂತಹ ಅಪರಾಧಿಗಳಿಗೆ ಶಕ್ತಿ ಕಾಯ್ದೆಯಡಿ ಎರಡು ವರ್ಷ ಶಿಕ್ಷೆ ವಿಧಿಸಲಾಗುತ್ತದೆ. ಮಹಿಳೆಯು ಕೂಡ ಸುಳ್ಳು ದೂರು  ನೀಡಿದರೆ, ಆಕೆಗೂ ಒಂದು ವರ್ಷ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಉದ್ದೇಶಿತ ಶಕ್ತಿ ಕಾಯ್ದೆಯ ಪ್ರಕಾರ, ಮಹಾರಾಷ್ಟ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 21 ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿ ಆರೋಪಿಗಳಿಗೆ ಶಿಕ್ಷೆಯ ವರೆಗೆ ಕಾಲಮಿತಿ ನೀಡಲಾಗುವುದು. ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿ ಮತ್ತು ಅತ್ಯಾಚಾರದಂತಹ ಅಪರಾಧಗಳಿಗೆ ಜಾಮೀನು ರದ್ದುಗೊಳಿಲಾಗುವುದು. ಮಹಿಳೆಯರಿಗೆ ಇ-ಮೇಲ್‌ಗ‌ಳು, ಎಲೆಕ್ಟ್ರಾನಿಕ್‌ ಮಾಧ್ಯಮಗಳು ಅಥವಾ ಸಂದೇಶಗಳ ಮೂಲಕ ಕಿರುಕುಳ ನೀಡಿದರೆ ಮತ್ತು ತಪ್ಪು ರೀತಿಯಲ್ಲಿ ಪ್ರತಿಕ್ರಿಯಿಸಿದರೆ ಅವರಿಗೆ ಕಠಿನ ಶಿಕ್ಷೆಯಾಗುತ್ತದೆ. ಇದರಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

ಸಾಮೂಹಿಕ ಅತ್ಯಾಚಾರ ಅಥವಾ ಕ್ರೂರ ರೂಪದ ಪ್ರಕರಣ ನಡೆಸಿದರೆ ಅಂತಹ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ, ಅತ್ಯಾಚಾರ ಪ್ರಕರಣಗಳನ್ನು ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ. ವರೆಗೆ ದಂಡ ಎಂದು ವರ್ಗೀಕರಿಸಲಾಗಿದೆ. ಹದಿನಾರು ವರ್ಷ ಪ್ರಾಯದೊಳಗಿನ ಹುಡುಗಿಯ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಆಗಬಹುದು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next