Advertisement

Dandeli: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ

03:03 PM Jun 11, 2023 | Team Udayavani |

ದಾಂಡೇಲಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಸಾರಿಗೆ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ದಾಂಡೇಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ.11 ರ ಭಾನುವಾರ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ. ದೇಶಪಾಂಡೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಮಯದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಪಡಿಸಲಿದೆ. ಶಕ್ತಿ ಯೋಜನೆಯ ಲಾಭವನ್ನು ಮಹಿಳೆಯರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾರಿಗೆ ಘಟಕದ ವ್ಯವಸ್ಥಾಪಕರು, ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next