Advertisement
ಈ ವಿಚಾರವಾಗಿ ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಇದರಿಂದಾಗಿ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಅನುಚಿತ ವರ್ತನೆ, ಅಹಿತಕರ ಘಟನೆಗಳು ನಡೆಯುತ್ತಿವೆ. ಬಸ್ ನಿಲ್ದಾಣ ಮತ್ತು ಸರ್ಕಾರಿ ಬಸ್‌ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
Related Articles
Advertisement
ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ದೂರದ ಊರಿಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸುವುದನ್ನು ನಿಷೇಧಿಸಬೇಕು. ಟಿಕೆಟ್ ಪಡೆದವರಿಗೆ ಶೇ.50ರಷ್ಟು ಸೀಟುಗಳನ್ನು ಮೀಸಲಿಡಬೇಕು. ಕಿಟಿಕಿ ಹಾಗೂ ಚಾಲಕರ ದ್ವಾರದ ಮೂಲಕ ಪ್ರಯಾಣಿಕರು ಹತ್ತುವುದನ್ನು ನಿರ್ಬಂಧಿಸಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.