ದಾವಣಗೆರೆ: ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಆಗುತ್ತದೆಯೇ ಎಂದು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ೫೧೫ ನೇ ಜಯಂತೋತ್ಸವದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಡಿ,ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಸಿದ್ದರಾಮಯ್ಯ ಅದಕ್ಕೆ ಮನಸ್ಸು ಮಾಡಬೇಕು ಎಂದು ಮಾಡಿರುವ ಮನವಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಸ್ವಾಮೀಜಿಯವರು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಎಂದು ಮರು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ನಾವು ಹೇಳೋಕೆ ಸಾಧ್ಯವೆ ಎಂದರು.
ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೇನು(ಬಸವರಾಜ್ ಶಿವಗಂಗಾ) ಗೊತ್ತು. ಯಾರೋ ಚಾರ್ಜ್ ಮಾಡಿ ಹಿಂಗೆ ಹೇಳು ಅಂತಿರಬೇಕು. ಅದಕ್ಕೆ ಹಾಗೆ ಹೇಳಿದ್ದಾರೆ ಎಂದರು.
ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲ ಸುಮ್ಮನೆ ಆಗಲ್ಲ. ಮಾಡಲ್ಲ. ಏನೇ ಮಾಡಿದರೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ