Advertisement

ಡಿಕೆಶಿ, ಸಿದ್ದು ಜತೆ ನಾನೂ ಸಿಎಂ ಹುದ್ದೆ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

10:00 PM Mar 20, 2022 | Team Udayavani |

ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುತ್ತೇನೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆಂದು ಹಿರಿಯ ಕಾಂಗ್ರೆಸ್ಸಿಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಅವರೊಂದಿಗೆ ನಾನೂ ಸ್ಪರ್ಧೆಯಲ್ಲಿದ್ದೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ನಾನೇ ಆಗುತ್ತೇನೆ. ನನಗೇನು ಹಣ, ಶಕ್ತಿ ಇಲ್ಲ ಎಂದು ಕೊಂಡಿದ್ದೀರಾ? ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡುತ್ತೇನೆ. ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯೂ ಆಗುತ್ತೇನೆ ಎಂದರು.

ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಜೂ.16ರಂದು ಮೊಮ್ಮಗಳ ಮದುವೆಗೆ ಬಸವರಾಜ ಬೊಮ್ಮಾಯಿ ಬರುತ್ತಾರೆ. ನಾನು ಕಾಂಗ್ರೆಸ್‌ನವನು. ಬಿಜೆಪಿಯವರು ಸ್ಪರ್ಧೆ ಮಾಡುವುದರ ಬಗ್ಗೆ ನನ್ನೊಂದಿಗೆ ಹೇಗೆ ಚರ್ಚೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next