Advertisement

ಸಚಿವರ ಕಾರ್ಯಕ್ರಮದಲ್ಲಿ ಅವಮಾನ

07:24 AM Jun 09, 2020 | Lakshmi GovindaRaj |

ಶಿಡ್ಲಘಟ್ಟ: ತಾಲೂಕಿನ ತಾತಹಳ್ಳಿಯ ಸಮೀಪ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪರಿಸರ ದಿನಾಚರಣೆಯ ಅವ್ಯವಸ್ಥೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು  ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಇದೀಗ ತಾಪಂ ಅಧ್ಯಕ್ಷ ರಾಜಶೇಖರ್‌ ಸಂಘಟಕರ ವಿರುದ ಆಕ್ರೋಶ ವ್ಯಕ್ತಪಡಿಸಿ ತಮಗೂ ಸಹ ಅವಮಾನಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

Advertisement

ನಗರದ  ತಾಪಂ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ದಿನಾಚರಣೆ ಆಚರಿಸಲು ಸಹಕಾರ ನೀಡಿದ ನಮಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೊಲೀಸರು ತಡೆಯೊಡ್ಡಿದರು ಎಂದು ರಾಜಶೇಖರ್‌ ಆರೋಪಿಸಿದರು.  ರೈತರು ಮತ್ತು ಪತ್ರಕರ್ತರನ್ನು ತಡೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಕ್ರಮದ ಆಯೋಜಕರಿಗೆ ನೋಟಿಸ್‌ ಜಾರಿಗೊಳಿಸಿ ಅವರಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು  ಸ್ಪಷ್ಟಪಡಿಸಿದರು.

ತಾಪಂ ಇಒ ಬಿ.ಶಿವಕುಮಾರ್‌ ಮಾತನಾಡಿ,  ಉದ್ಯೋಗ ಖಾತ್ರಿ ಯೋಜನೆಯಡಿ 64.304 ಲಕ್ಷ ರೂ. ವೆಚ್ಚದಲ್ಲಿ ತಾತಹಳ್ಳಿ ಅರಣ್ಯ ಪ್ರದೇಶವನ್ನು ಅಭಿವೃದಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಸಂಘಟನೆಯೊಂದರ ಪದಾಧಿಕಾರಿಗಳು ಯೋಜನೆಯಲ್ಲಿ  ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರ ಎಂದರು. ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, ತಾಲೂಕಿನಲ್ಲಿ ನರೇಗಾ  ಯೋಜನೆಯಡಿ ಬದು ನಿರ್ಮಾಣ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next