Advertisement

ಮುಸ್ಲಿಂ,ದಲಿತರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ: ಯೋಗಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ

01:13 PM Oct 11, 2020 | Mithun PG |

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ನಾಚಿಕೆಗೇಡಿನ ಸತ್ಯವೆಂದರೆ ಅನೇಕ ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರು ಎಂದು ಪರಿಗಣಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಉತ್ತರಪ್ರದೇಶ ಪೊಲೀಸರು ನೀಡುತ್ತಿರುವ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಸರ್ಕಾರ ಮತ್ತು ಅವರ ಪೊಲೀಸರು ಯಾರೂ ಕೂಡ ಅತ್ಯಾಚಾರವಾಗಲಿಲ್ಲ ಎಂದು ಹೇಳುತ್ತಿದ್ದಾರೆ. ಏಕೆಂದರೇ ಅತ್ಯಾಚಾರ ಸಂತ್ರಸ್ಥೆಯನ್ನು ಅವರು ಭಾರತೀಯಳೆಂದು ಪರಿಗಣಿಸಲಿಲ್ಲ. ಮಾತ್ರವಲ್ಲದೆ ಮಾಧ್ಯಮದ ವರದಿಯನ್ನು ಉಲ್ಲೇಖಿಸಿ ಪೊಲೀಸರು ಕೂಡ ಅತ್ಯಾಚಾರ ಆರೋಪವನ್ನು ನಿರಾಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸೆಪ್ಟೆಂಬರ್ 14 ರಂದು ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ದಲಿತ ಯುವತಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ, ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.  ಉತ್ತರ ಪ್ರದೇಶ ಪೊಲೀಸರು ಕೂಡ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೆ ನಾಲ್ವರನ್ನು ಬಂಧಿಸಲಾಗಿತ್ತು.

ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ಥೆಯ ಮನೆಗೆ ಭೇಟಿ ಕೊಟ್ಟು, ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರು ತನಿಖೆಯಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next