Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಸಿದ್ದರಾಮಯ್ಯ ಅವರನ್ನು ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಕಾಲೆಳೆದಿದ್ದಾರೆ. ಅಲ್ಲದೆ, #YstTax #CashForPosting ಹ್ಯಾಷ್ ಟ್ಯಾಗ್ ಹಾಕಿ ಟಾಂಗ್ ನೀಡಿದ್ದಾರೆ.
Related Articles
Advertisement
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಹೇಳಿರುವ ಕುಮಾರಸ್ವಾಮಿ ಅವರು; ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? ಎಂದು ಎಚ್ಚರಿಕೆ ನೀಡಿದ್ದಾರೆ.