Advertisement

Sports Awards;ಅರ್ಜುನ ಪ್ರಶಸ್ತಿಗೆ ಶಮಿ, ಖೇಲ್ ರತ್ನಕ್ಕೆ ಸಾತ್ವಿಕ್-ಚಿರಾಗ್ ನಾಮನಿರ್ದೇಶನ

07:55 PM Dec 13, 2023 | Team Udayavani |

ಹೊಸದಿಲ್ಲಿ: ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ವೇಗಿ ಮೊಹಮ್ಮದ್ ಶಮಿ ಈ ವರ್ಷದ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರೆ, ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

Advertisement

33ರ ಹರೆಯದ ಶಮಿ ಅವರು ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ 7 ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಕಿತ್ತು ಫೈನಲ್ ತಲುಪುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು. ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ಆಘಾತಕಾರಿ ಸೋಲು ಅನುಭವಿಸಿತ್ತು.

ಸಚಿವಾಲಯದ ಮೂಲಗಳ ಪ್ರಕಾರ, ಶಮಿ ಅವರ ಹೆಸರನ್ನು ಸೇರಿಸಲು ಬಿಸಿಸಿಐ ಕ್ರೀಡಾ ಸಚಿವಾಲಯಕ್ಕೆ ವಿಶೇಷ ವಿನಂತಿಯನ್ನು ಮಾಡಿದೆ, ಏಕೆಂದರೆ ಅವರು ಮೂಲತಃ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವದ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಉನ್ನತ ಕ್ರೀಡಾ ಪ್ರಶಸ್ತಿಗಳಿಗೆ ನಾಮನಿರ್ದೇಶಿತರು

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ (ಬ್ಯಾಡ್ಮಿಂಟನ್)

Advertisement

ಅರ್ಜುನ ಪ್ರಶಸ್ತಿ: ಮೊಹಮ್ಮದ್ ಶಮಿ (ಕ್ರಿಕೆಟ್), ಅಜಯ್ ರೆಡ್ಡಿ (ಅಂಧ ಕ್ರಿಕೆಟ್) ಓಜಸ್ ಪ್ರವೀಣ್ ಡಿಯೋಟಾಲೆ, ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಎಂ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ ಮತ್ತು ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಆಂಟಿಮ್ ಪಂಘಲ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನ್ನಿಸ್).

ಧ್ಯಾನ್ ಚಂದ್ ಜೀವಮಾನ ಪ್ರಶಸ್ತಿ: ಕವಿತಾ (ಕಬಡ್ಡಿ), ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್) ವಿನೀತ್ ಕುಮಾರ್ ಶರ್ಮಾ (ಹಾಕಿ).

ದ್ರೋಣಾಚಾರ್ಯ ಪ್ರಶಸ್ತಿ: ಗಣೇಶ್ ಪ್ರಭಾಕರನ್ (ಮಲ್ಲಖಾಂಬ್), ಮಹಾವೀರ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಶಿವೇಂದ್ರ ಸಿಂಗ್ (ಹಾಕಿ).

Advertisement

Udayavani is now on Telegram. Click here to join our channel and stay updated with the latest news.

Next