Advertisement

ಶನಿಮಹಾತ್ಮ ದೇವಾಲಯ ತೆರವಿಗೆ ಆದೇಶ

06:35 AM Mar 22, 2019 | Team Udayavani |

ಬೆಂಗಳೂರು: ನಗರದ ಕೇಂದ್ರ ರೈಲು ನಿಲ್ದಾಣಕ್ಕೆ ಹೊಂದಿಕೊಂಡಂತೆ ಓಕಳೀಪುರಂ ಜಂಕ್ಷನ್‌ ಬಳಿ ಇರುವ ಶನಿಮಹಾತ್ಮ ದೇವಾಲಯ ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಹೈಕೋರ್ಟ್‌ ಬಿಬಿಎಂಪಿಗೆ ಆದೇಶಿಸಿದೆ.

Advertisement

ಈ ಸಂಬಂಧ ಮತ್ತೀಕೆರೆಯ ನಿವಾಸಿ ಕೆ.ಎಸ್‌.ಸುಬ್ರಮಣ್ಯನ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ದೇವಾಲಯವು ಗ್ರೇಡ್‌ ಸಪರೇಟರ್‌ ಕಾಮಗಾರಿಗೆ ಹಾಗೂ ಬಹುಪಥದ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದೆ.

ಆದ್ದರಿಂದ ಕಾಲಮಿತಿಯೊಳಗೆ ತೆರವುಗೊಳಿಸಿ, ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿತು. ವಿಚಾರಣೆ ವೇಳೆ, ಶನಿ ದೇವಾಲಯವನ್ನು ಹತ್ತಿರದಲ್ಲೇ ಇರುವ ಗಣೇಶ ದೇವಾಲಯದ ಪಕ್ಕಕ್ಕೆ ಸ್ಥಳಾಂತರಿಸಲು ಸಂಬಂಧಪಟ್ಟವರಿಗೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಇದೇ ವೇಳೆ, ವಿವಾದಿತ ಪ್ರದೇಶ ರೈಲ್ವೆ ಇಲಾಖೆಗೆ ಸೇರಿದ್ದರೂ ಯೋಜನೆಯ ಸಲುವಾಗಿ ಅದನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಗಿದೆ. ಇದಕ್ಕೆ ಬದಲಾಗಿ ಬಿನ್ನಿ ಮಿಲ್‌ ಬಳಿ 3 ಎಕರೆ ಜಾಗವನ್ನು ಪಡೆದುಕೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ಪರ ವಕೀಲರು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next