ಮಡಿಕೇರಿ: ಶನಿವಾರಸಂತೆ ಹೋಬಳಿ ಹೆಗ್ಗುಳ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಕೃಷಿಕ ಎಚ್.ಎಸ್. ಕಿರಣ್ ಅವರಿಗೆ ಸೇರಿದ ಭತ್ತದ ಗದ್ದೆಗೆ ದಾಳಿ ಮಾಡಿದ ಕಾಡಾನೆಗಳ ಹಿಂಡು ಸಸಿಗಳನ್ನು ತಿಂದು ನಾಶ ಮಾಡಿದೆ.
Advertisement
ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ತೋಟ ಹಾಗೂ ಗದ್ದೆಗಳಿಗೆ ಹಾನಿ ಉಂಟು ಮಾಡುತ್ತಿವೆ. ಕೃಷಿಕ ವರ್ಗಕ್ಕೆ ಸಾಕಷ್ಟು ನಷ್ಟ ಉಂಟಾಗಿದ್ದು, ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಮತ್ತು ಕಾಡಾನೆ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಇಟಾನಗರದಲ್ಲಿ ಭಾರಿ ಅಗ್ನಿ ಅವಘಡ : 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ