Advertisement

ವಸತಿ ನಿಲಯ ಸದ್ಬಳಕೆಗೆ ಕರೆ

12:25 PM Oct 16, 2019 | Naveen |

ಶಹಾಪುರ: ಶಿಕ್ಷಣಕ್ಕಾಗಿ ಗ್ರಾಮೀಣ ಭಾಗದಿಂದ ಸಾಕಷ್ಟು ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಿದ್ದು, ವಸತಿಗಾಗಿ ಪರಿತಪಿಸುವಂತಾಗಿದೆ. ಸಮರ್ಪಕ ವಸತಿ ಸೌಲಭ್ಯ ದೊರೆಯದ ಕಾರಣ ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಬೇಕಾದಂತ ಸ್ಥಿತಿ ನಿರ್ಮಾವಾಗಿತ್ತು.

Advertisement

ಕಾರಣ ಅದಕ್ಕೆಲ್ಲ ಪೂರಕ ವ್ಯವಸ್ಥೆಗಾಗಿ ವಸತಿ ನಿಲಯ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ನಗರದ ಎನ್‌ಜಿಒ ಕಾಲೋನಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ ನೂತನ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅನುದಾನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನೂತನ ವಸತಿ ನಿಲಯ ಸೌಲಭ್ಯ ಕಲ್ಪಿಸಲಾಗಿದೆ. 2017ನೇ ಸಾಲಿನ ಅನುದಾನದಲ್ಲಿ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಈ ನಿಲಯ ನಿರ್ಮಾಣ ಮಾಡಲಾಗಿದೆ.

ಸುಮಾರು 150 ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆ. ವಸತಿ ನಿಲಯದ ಸದುಪೋಗ ಪಡೆದುಕೊಂಡು ಶೈಕ್ಷಣಿಕವಾಗಿ ಉತ್ತಮ ಬೆಳವಣಿಗೆ ಹೊಂದಬೇಕು ಎಂದರು.

Advertisement

ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್‌ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋಣೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಹುದ್ದೆ ಪಡೆದು ಹೆಸರು ಮಾಡಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಂ.ಎಸ್‌. ಅಲ್ಲಾಬಕಾಷ, ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ, ಮುಖಂಡರಾದ ನಾಗರಾಜ ಮಡ್ಡಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಹುತಪ್ಪ ಹವಲ್ದಾರ, ನಗರಸಭೆ ಸದಸ್ಯ ಶಿವುಕುಮಾರ ತಳವಾರ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next