Advertisement

ಸುಪ್ರೀಂ ಕೋರ್ಟ್ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ

09:25 AM Nov 19, 2019 | keerthan |

ಹೊಸದಿಲ್ಲಿ: ಭಾರತದ ಸರ್ವೋಚ್ಛ ನ್ಯಾಯಾಲಯದ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಅರವಿಂದ್ ಬೋಬ್ಡೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

ಮುಂದಿನ 18 ತಿಂಗಳ ಕಾಲ ಶರದ್ ಬೋಬ್ಡೆ ಸಿಜೆಐಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇಂದು ಬೆಳಿಗ್ಗೆ 9.30ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ.

ಈ ಹಿಂದಿನ ಮುಖ್ಯನ್ಯಾಯಮೂರ್ತಿಯಾಗಿದ್ದ ರಂಜನ್ ಗೋಗೋಯ್ ಅವರು ಕಳೆದ ಅಕ್ಟೋಬರ್ 18ರಂದು ಶರದ್ ಅರವಿಂದ್ ಬೋಬ್ಡೆ ಅವರನ್ನು ಮುಂದಿನ ನ್ಯಾಯಮೂರ್ತಿಯಾಗಿ ಸೂಚಿಸಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು.

ಇತ್ತೀಚೆಗೆ ಹೊರಬಿದ್ದ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದಲ್ಲಿ ಶರದ್ ಕೂಡಾ ಓರ್ವರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next