Advertisement
ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸ ಬೇಕೆಂದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಆಗ್ರಹಿಸಿದ್ದು, ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸಂಸದರ ನಿಯೋಗ ಜು. 18ರಂದು ದಿಲ್ಲಿಗೆ ತೆರಳಿ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿತ್ತು.ದೇಶದ ಆಂತರಿಕ ಭದ್ರತೆಗೆ ಅಪಾಯ ತರುವ ಅಥವಾ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ಸಾಮಾನ್ಯವಾಗಿ ಎನ್‌ಐಎಗೆ ವಹಿಸಲಾಗುತ್ತದೆ. ಆದರೆ ಕೇಂದ್ರ ಸರಕಾರವು ರಾಜ್ಯ ಸರಕಾರಗಳ ಅನುಮತಿ ಇಲ್ಲದೆ ನೇರವಾಗಿ ಪ್ರಕರಣಗಳನ್ನು ಎನ್‌ಐಎಗೆ ವಹಿಸುವಂತಿಲ್ಲ. ರಾಜ್ಯ ಸರಕಾರವು ಎನ್‌ಐಎಗೆ ವಹಿಸುವ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕಾಗುತ್ತದೆ.
ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ ಎಂದು ಹೇಳಿದೆ. ಆದರೆ ಕೊಲೆ ನಡೆದು 17 ದಿನಗ
ಕಳೆದರೂ ಆರೋಪಿಗಳ ಪತ್ತೆಯಾದಿರುವ ಹಿನ್ನೆಲೆಯಲ್ಲಿ ಪ್ರಕರಣ ವನ್ನು ಎನ್‌ಐಎಗೆ ವಹಿಸುವಂತೆ ಒತ್ತಡಗಳು ಬರುತ್ತಿವೆ.