Advertisement

ಬೆಂಗಳೂರಿನಲ್ಲಿ ನಡೆಯುವ ವಿಪಕ್ಷಗಳ ಸಭೆಗೆ ಗೈರಾಗಲಿದ್ದಾರಾ ಎನ್ ಸಿಪಿ ನಾಯಕ ಶರದ್ ಪವಾರ್

09:53 AM Jul 17, 2023 | Team Udayavani |

ಮುಂಬೈ: ಕೇಂದ್ರ ಬಿಜೆಪಿ ಸರ್ಕಾರದ ಎನ್‍ಡಿಎ ಮೈತ್ರಿ ಕೂಟದ ವಿರುದ್ಧ ಒಟ್ಟಾಗಿರುವ ಯುಪಿಎ ಮೈತ್ರಿಕೂಟದ ಮಹತ್ವದ ಸಭೆ ಇಂದು ಮತ್ತೆ ನಾಳೆ ನಡೆಯಲಿದ್ದು ಈ ಸಭೆಗೆ ಎನ್ ಸಿಪಿ ನಾಯಕ ಶರದ್ ಪವಾರ್ ಗೈರಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು ಸೋಮವಾರ ಬೆಳಿಗ್ಗೆ ಪವರ್ ಬಣದ ವಕ್ತಾರರು ಮಾಡಿರುವ ಟ್ವೀಟ್ ಇದಕ್ಕೆ ಸಾಕ್ಷಿಯಾಗಿದೆ.

Advertisement

2024ರ ಲೋಕಸಭೆ ಚುನಾವಣೆಗೆ ಈಗಾಗಲೇ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟ್ ಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎ ಸರಕಾರಕ್ಕೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಎರಡು ದಿನಗಳ ಸಭೆ ನಡೆಯಲಿದೆ ಅಲ್ಲದೆ ಈ ಸಭೆಯಲ್ಲಿ ಒಟ್ಟು 26 ವಿರೋಧ ಪಕ್ಷ ನಾಯಕರು ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಸಭೆಯ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೋಡಿಕೊಳ್ಳುತ್ತಿದ್ದಾರೆ.

ಏತನ್ಮಧ್ಯೆ ಸೋಮವಾರ ನಡೆಯುವ ಸಭೆಗೆ ಶರದ್ ಪವಾರ್ ಗೈರಾಗಲಿದ್ದು ಮಂಗಳವಾರದ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಬಲ ಒಕ್ಕೂಟ ರಚಿಸಲು ಪ್ರತಿಪಕ್ಷಗಳು ಒಗ್ಗೂಡಿದ್ದು ಇಂದು ಮತ್ತೆ ನಾಳೆ ನಡೆಯುವ ಸಭೆ ಬಹಳಷ್ಟು ಮಹತ್ವವನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇದರ ನಡುವೆ ಎನ್ ಸಿಪಿ ನಾಯಕ ಶರದ್ ಪವಾರ್ ಸಭೆಯಿಂದ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಟ್ರಕ್ ಕಾರು ನಡುವೆ ಭೀಕರ ಅಪಘಾತ… 6 ಮಂದಿ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

Advertisement

ಬಿಹಾರ ರಾಜಧಾನಿ ಪಟ್ನಾದಲ್ಲಿ ಜೂನ್‌ 23 ರಂದು ಮೊದಲ ಸಭೆ ನಡೆದಿತ್ತು ಆ ಬಳಿಕ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಭೆ ಸೇರಲು ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಸಭೆ ರದ್ದಾಯಿತು ಈ ಈ ಇದೀಗ ಬೆಂಗಳೂರಿನಲ್ಲಿ ಎರಡು ದಿನಗಳ ಸಭೆ ನಡೆಯಲಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ಜೈರಾಮ್‌ ರಮೇಶ್‌ ಮತ್ತು ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ತಾಜ್‌ ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಗೆ ಸಿದ್ಧತೆ ಮಾಡಿಕೊಳ್ಳಲು ಭಾನುವಾರವೇ ನಗರಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು ಯಾವೆಲ್ಲ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next