ನವ ದೆಹಲಿ : ಅನಿಲ್ ದೇಶ್ ಮುಖ್ ಅವರ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಕಡಿವಾಣ ಹಾಕಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಮೇಲೆ ಇದ್ದ ಭ್ರಷ್ಟಾಚಾರದ ಆರೋಪದ ಹಿನ್ನಲೆಯಲ್ಲಿ ರಾಜಿನಾಮೆ ಕೊಡುವ ಅಗತ್ಯವಿಲ್ಲ ಎಂದು ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.
ಓದಿ : ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!
ನಿನ್ನೆ(ಮಾ.21) ಮಹಾರಾಷ್ಟ್ರದ ಮೈತ್ರಿ ಸರ್ಕಾರ ದೇಶ್ ಮುಖ್ ಅವರು ರಾಜಕೀಯದಲ್ಲಿ ಸುರಕ್ಷಿತವಾಗಿ ಉಳಿಯಲಿದ್ದಾರೆ ಎಂಬ ಸುಳಿವು ನೀಡಿತ್ತು. ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಪದ ಬಗ್ಗೆ ತನಿಖೆ ಮಾಡಲು ಒಪ್ಪಿಕೊಂಡಿರುವ ಕಾರಣದಿಂದ ಅವರ ರಾಜಿನಾಮೆಗೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿತ್ತು.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಪತ್ರದಲ್ಲಿ ಆರೋಪಿಸಿರುವ ವಿಚಾರ ಮಹಾರಾಷ್ಟ್ರ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿ ಮಾಡಿದ್ದು ಇಂದು ಬಹಿರಂಗಪಡಿಸಿದೆ.
ಇನ್ನು, ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಸಿಬಿಐ ತನಿಖೆಯಾಗಬೇಕು ಎಂದು ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.
ಓದಿ : ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಕೃಷ್ಣ ವಿ. ಶೆಟ್ಟಿ ಅಧಿಕಾರ ಸ್ವೀಕಾರ