ನವದೆಹಲಿ: ಅಯೋಧ್ಯೆ ಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಈಗಾಗಲೇ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾವಿರಾರು ಮಂದಿ ಭಾಗಿಯಾಗಲಿದ್ದಾರೆ.
ಈ ನಡುವೆ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಬುಧವಾರ ಹೇಳಿದ್ದಾರೆ ಮತ್ತು ಪಕ್ಷವು ಈ ವಿಷಯವನ್ನು ರಾಜಕೀಯ ಅಥವಾ ವಾಣಿಜ್ಯ ಉದ್ದೇಶಗಳಿಗಾಗಿ ಬಳಸುತ್ತಿದೆಯೇ ಎಂದು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ.
ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು 6,000 ಕ್ಕೂ ಹೆಚ್ಚು ಜನರು “ಪ್ರಾಣ ಪ್ರತಿಷ್ಠಾ”, ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಈ ಕುರಿತು ಹೇಳಿಕೆ ನೀಡಿದ ಪವಾರ್, “ರಾಮ ಮಂದಿರದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿಲ್ಲ, ನನಗೆ ಕೆಲವು ನಂಬಿಕೆಯ ಸ್ಥಳಗಳಿವೆ, ನಾನು ಅಲ್ಲಿಗೆ ಹೋಗುತ್ತೇನೆ. ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಪ್ರಶ್ನೆಯು ವೈಯಕ್ತಿಕವಾಗಿದೆ. ಇದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ರಾಮಮಂದಿರದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆಯೋ ಅಥವಾ ವ್ಯಾಪಾರ ಮಾಡುತ್ತಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Shivamogga: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ರೌಡಿ ಶೀಟರ್ ಕಾಲಿಗೆ ಗುಂಡೇಟು