ಮುಂಬಯಿ: ಎನ್ ಸಿಪಿ(ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ)ಯ ವರಿಷ್ಠ ಶರದ್ ಪವಾರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರು ದಕ್ಷಿಣ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮಾರ್ಚ್ 31ಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹುಟ್ಟುಹಬ್ಬಕ್ಕೆ ಹೋದವರು ಮಸಣ ಸೇರಿದರು..: ಕಾರು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು
ಶರದ್ ಪವಾರ್ ಅವರ ಪಿತ್ತಕೋಶದಲ್ಲಿ ಸಮಸ್ಯೆಯನ್ನು ವೈದ್ಯರು ಪತ್ತೆಹಚ್ಚಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲು ವೈದ್ಯರು ಸಲಹೆ ನೀಡಿರುವುದಾಗಿ ಪಕ್ಷದ ಮುಖಂಡ ನವಾಬ್ ಮಲಿಕ್ ಸೋಮವಾರ(ಮಾರ್ಚ್ 29) ತಿಳಿಸಿದ್ದಾರೆ.
ಹೊಟ್ಟೆಯಲ್ಲಿ ವಿಪರೀತ ನೋವು ಕಾಣಿಸಿಕೊಂಡ ಪರಿಣಾಮ ಶರದ್ ಪವಾರ್ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಪಿತ್ತಕೋಶದಲ್ಲಿ ಸಮಸ್ಯೆ ಪತ್ತೆಯಾಗಿತ್ತು. ಈ ನಿಟ್ಟಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಮಾರ್ಚ್ 31ರಂದು ಪವಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಮಲಿಕ್ ಮಾಹಿತಿ ನೀಡಿದ್ದಾರೆ.
80ವರ್ಷದ ಶರದ್ ಪವಾರ್ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದಿದ್ದರು. ಇದಕ್ಕಾಗಿ ಅವರು ರಕ್ತಶುದ್ದೀಕರಣ ಪ್ರಕ್ರಿಯೆಗೆ ಒಳಗಾಗಬೇಕಿತ್ತು. ಆದರೆ ಪಿತ್ತಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ನಿಲ್ಲಿಸಲಾಗಿದೆ ಎಂದು ನವಾಬ್ ತಿಳಿಸಿದ್ದಾರೆ.