Advertisement

Maharashtra ಜೀವಮಾನದಲ್ಲಿ ಬಿಜೆಪಿ ಜೊತೆ ಶರದ್ ಪವಾರ್ ಕೈಜೋಡಿಸಲ್ಲ: ಸಂಜಯ್ ರಾವುತ್

03:24 PM Aug 16, 2023 | Team Udayavani |

ಮುಂಬೈ: ಶರದ್ ಪವಾರ್ ಅವರು ತಮ್ಮ ಜೀವಿತಾವಧಿಯಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಕೈಜೋಡಿಸುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಬುಧವಾರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ವರ್ಷ 2024 ರಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ವಿರೋಧ ಪಕ್ಷದ ಇಂಡಿಯಾ ಮೈತ್ರಿಕೂಟದ ಪ್ರಧಾನಿ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ ಮತ್ತು ದೇಶವು ಆ “ಶುಭ” ಕ್ಷಣಕ್ಕಾಗಿ ಕಾಯುತ್ತಿದೆ ಎಂದು ಹೇಳಿದರು.

“ಶರದ್ ಪವಾರ್ ಅವರು ಬದುಕಿರುವವರೆಗೂ ಬಿಜೆಪಿಯೊಂದಿಗೆ ಕೈಜೋಡಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ತಮ್ಮ ಪಕ್ಷವನ್ನು ಮರುನಿರ್ಮಾಣ ಮಾಡುತ್ತಿದ್ದಾರೆ” ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿದೆ.

ಶನಿವಾರ ಪುಣೆಯ ಉದ್ಯಮಿಯೊಬ್ಬರ ನಿವಾಸದಲ್ಲಿ ಶರದ್ ಪವಾರ್ ಮತ್ತು ಅವರ ಸೋದರಳಿಯ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಡುವೆ ನಡೆದ ಸಭೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

Advertisement

ಸಭೆಯ ವೇಳೆ ಶರದ್ ಪವಾರ್ ಅವರಿಗೆ ಅಜಿತ್ ಪವಾರ್ ಯಾವುದೇ ಆಫರ್ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಮಾತನಾಡಿದ ರಾವತ್, “ಅಜಿತ್ ಪವಾರ್ ಯಾವಾಗ ಶರದ್ ಪವಾರ್ ಅವರಿಗೆ ಆಫರ್ ನೀಡಲು ಇಷ್ಟು ದೊಡ್ಡವರಾದರು” ಎಂದು ಹೇಳಿದರು.

ಶರದ್ ಪವಾರ್ ಅವರು ನಾಲ್ಕು ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು ಮತ್ತು ಅನೇಕ ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next