Advertisement

ಶರತ್‌ ಪ್ರಕರಣ: ಐವರ ಜಾಮೀನು ಆದೇಶ ಮುಂದೂಡಿಕೆ

08:25 AM Jul 23, 2017 | Harsha Rao |

ಮಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಶವಯಾತ್ರೆ ಸಂದರ್ಭ ನಡೆದ ಕಲ್ಲು ತೂರಾಟ ಮತ್ತು ಗಲಭೆ ಪ್ರಕರಣಕ್ಕೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಸಂಘಟನೆಗಳ ಐವರು ಮುಖಂಡರು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಆದೇಶ ಪ್ರಕಟನೆ ಜು. 26ಕ್ಕೆ ಮುಂದೂಡಿಕೆಯಾಗಿದೆ.

Advertisement

ಕಲ್ಲು ತೂರಾಟ ಮತ್ತು ಗಲಭೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್‌, ಬಿಜೆಪಿ ಯುವ ಮೋರ್ಚಾ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ ಪೂಂಜ, ಬಜರಂಗದಳ ಪ್ರಾಂತ ಸಂಯೋಜಕ ಶರಣ್‌ ಪಂಪ್‌ವೆಲ್‌, ಬಜರಂಗದಳದ ಮುಖಂಡ ಪ್ರದೀಪ್‌ ಪಂಪ್‌ವೆಲ್‌ ಮತ್ತು ಹಿಂದೂ 
ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಮುರಳಿಕೃಷ್ಣ ಹಸಂತಡ್ಕ ವಿರುದ್ಧ ಆರೋಪವಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next