ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ವಿಧಾನಸಭೆ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ (ಜೆಡಿಯು-ಶರದ್ ಯಾದವ್ ಬಣ) ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಚುನಾವಣಾ ಪ್ರಚಾರ ಕೈಗೊಳ್ಳಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ.ನಾಡಗೌಡರು ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ.28 ರಂದು ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡಿದ್ದ ಕಾರ್ಯಕಾರಿಣಿ
ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ,ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ.
ಅಲ್ಲದೆ, ಬಿಜೆಪಿ ಪ್ರಜಾಪ್ರ ಭುತ್ವ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಕೆಲವು ನಿರ್ಧಾರಗಳನ್ನು ತೆಗೆದು ಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಈ ತೀರ್ಮಾನ ಮಾಡಿ ದ್ದಾರೆ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಅಶ್ವತ್ ನಾರಾ ಯಣ್, ದೊಡ್ಡಣ್ಣ, ವೆಂಕಟಸ್ವಾಮಿ,ಹಾಲಪ್ಪ ಭಾಗವಹಿಸಿದ್ದರು