Advertisement
ಅ. 8ರಿಂದ ಪೂಜಿಸಲ್ಪಟ್ಟ ಶಾರದಾ ಮಾತೆಯನ್ನು ಸರ್ವಾಲಂಕೃತಗೊಳಿಸಿ, ಸೋಮವಾರ ಸಂಜೆಯಿಂದ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಸಹಸ್ರಾರು ಭಕ್ತರು ಶಾರದಾ ಮಾತೆಯನ್ನು ಕಣ್ತುಂಬಿಕೊಂಡು ಪ್ರಸಾದ ಸ್ವೀಕರಿಸಿದರು.
Related Articles
Advertisement
ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಉತ್ಸವ ಸ್ಥಾನದಿಂದ ಹೊರಟು ಶ್ರೀ ಮಹಾಮಾಯ ದೇವಾಲಯವಾಗಿ, ಕೆನರಾ ಹೈಸ್ಕೂಲ್‌ನ ಹಿಂಬದಿಯಿಂದ ನವಭಾರತ್ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್, ಬಸವನಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಜಲಸ್ತಂಭನಗೊಳಿಸಲಾಯಿತು.ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋ ಗಮನ ಸೆಳೆಯಿತು. ಸಮಿತಿ ಅಧ್ಯಕ್ಷ ಡಾ| ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಪಂಡಿತ್ ನರಸಿಂಹ ಆಚಾರ್ಯ, ಜೋಡುಮಠ ಭಾಸ್ಕರ್ ಭಟ್, ದತ್ತಾತ್ರೇಯ ಭಟ್, ಗಣೇಶ್ ಬಾಳಿಗ, ಸುರೇಶ್ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ನಂದನ್ ಮಲ್ಯ, ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್, ಎಸ್‌ಪಿ ಅನುಪಮ್ ಅಗರ್‌ವಾಲ್ ಸಹಿತ ಹಲವಾರು ಭಕ್ತರು ಪಾಲ್ಗೊಂಡರು.