ಶರಣ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಕರ್ವಖ್ಯಾತಿಯ ನವನೀತ್ ನಿರ್ದೇಶಿಸುತ್ತಿದ್ದಾರೆ. ತರುಣ್ ಟಾಕೀಸ್‌ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಮಾನಸ ತರುಣ್ ಆರಂಭ ಫಲಕ ತೋರಿದರೆ, ನಿರ್ದೇಶಕ ತರುಣ್ ಸುಧೀರ್ ಕ್ಯಾಮೆರಾ ಚಾಲನೆ ಮಾಡಿದರು. ಹಾರಾರ್‌ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ,ಕಥೆ, ಚಿತ್ರಕಥೆ ಬರೆದಿದ್ದಾರೆ.
ಇದನ್ನೂ ಓದಿ:‘ಕೆಜಿಎಫ್’ ಚಿತ್ರಕ್ಕೆ ಹೋಲಿಸಿ ಇದೀಗ ಸಖತ್ ಟ್ರೋಲ್ ಆದ ಅಲ್ಲು ಅರ್ಜುನ್ ಚಿತ್ರ ‘ಪುಷ್ಪ’
ಶರಣ್ ನಾಯಕರಾಗಿ ನಟಿಸುತ್ತಿದ್ದು, ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಬೆಂಗಳೂರು ಹಾಗೂ ಉತ್ತರಖಂಡ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಮಾಸಾಂತ್ಯಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಸದ್ಯ ನಟ ಶರಣ್ ಅಭಿನಯದ “ಅವತಾರ್ ಪುರುಷ’ ಬಿಡುಗಡೆಗೆ ಬಂದಿದೆ. ಇದು ಔಟ್‌ಅಂಡ್ ಔಟ್‌ಕಾಮಿಡಿ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸುನಿ ಈ ಚಿತ್ರದ ನಿರ್ದೇಶಕರು. ಶರಣ್ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್‌ನಲ್ಲಿ ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆ ನೀಡುತ್ತದೆ ಚಿತ್ರತಂಡ.
ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ಸಾಕಷ್ಟು ಜನ ಅನುಭವಿ ಕಲಾವಿದರು ನಟಿಸಿದ್ದಾರೆ. ಶ್ರೀನಗರಕಿಟ್ಟಿ ಒಂದು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಯಿಕುಮಾರ್, ಆಶುತೋಷ್ ರಾಣಾ, ಸುಧಾರಾಣಿ ಮುಂತಾದಕಲಾವಿದರ ಬಳಗ ಈ ಚಿತ್ರದಲ್ಲಿದೆ.