ಕಲಬುರಗಿ: ನೆರೆಯ ಯಾದಗಿರಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಎಂ.ಬಿ. ಪಾಟೀಲ್ ಹೊರತುಪಡಿಸಿದರೆ ಉಳಿದ ಎಲ್ಲ ಲಿಂಗಾಯತ ಸಚಿವರಿಗೆ ಸಣ್ಣ, ಸಣ್ಣ ಖಾತೆಗಳನ್ನು ನೀಡಲಾಗಿದೆ ಎಂಬ ವ್ಯಾಪಕ ಆಕ್ರೋಶದ ಹಿನ್ನೆಲೆಯಲ್ಲಿ ನಾಲ್ಕು ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:NPS ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
ಈ ನಿಗಮ ಮಂಡಳಿಗೆ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೇಮಗೊಂಡಿರುವುದಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.