ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವು ಸಂಘಟಿತ ಅಂತಾರಾಜ್ಯ ಅಪರಾಧವಾಗಿದ್ದು, ಇಡೀ ಸರಕಾರವೇ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್, ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಯೂ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಸಚಿವ ಶರಣಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಭೆ?
ಲೆಕ್ಕಾಧಿಕಾರಿ ಪರಶುರಾಮ್ ಅವರು ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಸಭೆ ನಡೆದಿದ್ದ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಸಿಸಿಟಿವಿ ತುಣುಕು, ಸಾಕ್ಷ್ಯಾಧಾರಗಳನ್ನು ರಕ್ಷಿಸುವಂತೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಆದ್ದರಿಂದ ಸಚಿವರ ಕಚೇರಿಯಲ್ಲಿ ನಡೆಸಿದ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ರಕ್ಷಿಸಬೇಕು. ಮುಖ್ಯಮಂತ್ರಿಗಳು “ಭ್ರಷ್ಟರ ರಕ್ಷಣೆ ಖಾತೆ’ ಎಂಬ ಹೊಸ ಖಾತೆಯ
ನ್ನೇನಾದರೂ ಹೊಂದಿದ್ದಾರೆಯೇ? ದಲಿತರ ಹಣ ಲೂಟಿಯಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲರಿಗೂ ಪಾಲು ಹೋಗಿದೆ ಎಂದು ಆರೋಪಿಸಿದರು.