ಬೆಂಗಳೂರು: ಹೊಸಕೋಟೆಯ ವಿಧಾನಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.
ಶರತ್ ಬಚ್ಚೇಗೌಡ ಅವರು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಾರಣ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶರತ್ ಬಚ್ಚೇಗೌಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ನಾವೇ ಪಡೆಯುತ್ತೇವೆ ಎಂದರು.
ತಮ್ಮ ವಿರುದ್ದ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ದೂರು ನೀಡಿರುವುದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸವಿಲ್ಲದ ಕಾರಣ ಇಂತಹ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಆದ್ಯತೆ ಕೊಡುವ ಅಗತ್ಯವಿಲ್ಲಎಂದರು.
ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಗೆಲುವು ನಿಶ್ಚಿತ. ಅಂತಹ ಪ್ರಾಮಾಣಿಕರನ್ನು ಜನ ಬೆಂಬಲಿಸುವುದು ನಿಶ್ಚಿತ. ಶರತ್ ಬಚ್ಚೇಗೌಡ ನೂರಕ್ಕೆ ನೂರರಷ್ಟು ಸೋಲನುಭವಿಸಿದು ಖಚಿತ ಎಂದರು.