ಭಟ್ಕಳ: ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಅವೈಜ್ಞಾನಿಕವಾಗಿದ್ದು ಇದಕ್ಕೆ ನಾಗರೀಕರ
ಹಾಗೂ ಬಿ.ಜೆ.ಪಿ. ತೀವ್ರ ವಿರೋಧವಿದೆ ಎಂದು ಮಾಜಿ ಶಾಸಕ ಹಾಗೂ ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ
ಹೇಳಿದರು.
Advertisement
ಭಟ್ಕಳ ಬಿ.ಜೆ.ಪಿ. ಮಂಡಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಜಾರಿಗೆ ಮುಂದಾದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಹಸಿರು ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿಯೂ ಕೂಡಾ ಹೋರಾಟ ಮಾಡಲಾಗುವುದು. ಪ್ರಥಮ ಹಂತದಲ್ಲಿ ಪ್ರತಿಭಟನೆ ಕೈಗೊಳ್ಳುವುದನ್ನು ನಿರ್ಧರಿಸಲು ಹೊನ್ನಾವರವನ್ನುಕೇಂದ್ರವನ್ನಾಗಿರಿಸಿಕೊಂಡು ಶೀಘ್ರದಲ್ಲೇ ಒಂದು ಸಭೆ ಮಾಡಲಾಗುವುದು ಎಂದರು.
ತನಕ ನ್ಯಾಯಕ್ಕಾಗಿ ಹೋರಾಟ ಮಾಡಲೂ ಸಿದ್ಧ.
Related Articles
ಕೈಗೊಳ್ಳಬೇಕು. ಅಲ್ಲದೇ ಶರಾವತಿಯಿಂದ 30-40 ಟಿ.ಎಂ.ಸಿ. ನೀರನ್ನು ಎತ್ತಿ ಬೆಂಗಳೂರಿಗೆ ತೆಗೆದುಕೊಂಡು ಹೋದರೆ ಹೊಳೆಯಲ್ಲಿ ಉಪ್ಪು ನೀರು ನುಗ್ಗಿ ನದಿ ಪಾತ್ರದಲ್ಲಿರುವ ಸಾವಿರಾರು ಎಕರೆ ಜಮೀನು ನಿಷ್ಪ್ರಯೋಜಕವಾಗಲಿದೆ ಎಂದರು.
Advertisement
ಈಗಾಗಲೇ 16 ಸಾವಿರ ಕೋಟಿ ವೆಚ್ಚ ಮಾಡಿದ ಎತ್ತಿನಹೊಳೆ ಯೋಜನೆಯಲ್ಲಿ ಒಂದು ಹನಿ ನೀರು ಬೆಂಗಳೂರು ತಲುಪಿಲ್ಲ. ಸರಕಾರದ ಅಧಿಕಾರಿಗಳಲ್ಲಿಯೇ ಗೊಂದಲವಿದ್ದು ಹೇಗೆ ನೀರು ತೆಗೆದುಕೊಂದು ಹೋಗಬೇಕೆನ್ನುವ ಕುರಿತು ಸ್ಪಷ್ಟತೆ ಇಲ್ಲಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ, ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ, ಪಶ್ಚಿಮಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿ.ಜೆ.ಪಿ. ಮಂಡಳ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಹೊನ್ನಾವರದ ರಾಜು ಭಂಡಾರಿ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಪ್ರಮುಖರಾದ ಕೇದಾರ ಕೊಲ್ಲೆ, ಶ್ರೀನಿವಾಸ ನಾಯ್ಕ, ಉಮೇಶ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.