ಮುಂಬಯಿ: ಏರಿಳಿಕೆಯ ವಹಿವಾಟಿನ ನಡುವೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಮಂಗಳವಾರ(ಮೇ 24) 132 ಅಂಕಗಳಷ್ಟು ಏರಿಕೆಯೊಂದಿಗೆ ಆರಂಭಿಕ ವಹಿವಾಟು ನಡೆದಿದೆ.
ಇದನ್ನೂ ಓದಿ:ದೆಹಲಿ: ಏಳನೇ ಮಹಡಿಯಿಂದ ಜಿಗಿದು ಐಟಿ ಸಚಿವಾಲಯದ ವಿಜ್ಞಾನಿ ಆತ್ಮಹತ್ಯೆ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಇಂದು 132.18 ಅಂಕಗಳಷ್ಟು ಏರಿಕೆಯೊಂದಿಗೆ 54,420.79 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 41.15 ಅಂಕ ಏರಿಕೆಯಾಗಿದ್ದು, 16,255.85 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಪರಿಣಾಮ ಮಹೀಂದ್ರ ಆ್ಯಂಡ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ಟಾಟಾ ಸ್ಟೀಲ್, ಪವರ್ ಗ್ರಿಡ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಹಿಂದೂಸ್ತಾನ್ ಯೂನಿಲಿವರ್, ಭಾರ್ತಿ ಏರ್ ಟೆಲ್, ಟೈಟಾನ್ ಮತ್ತು ಟಿಸಿಎಸ್ ಷೇರುಗಳು ನಷ್ಟ ಕಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಹಾಂಗ್ ಕಾಂಗ್, ಶಾಂಘೈ, ಸಿಯೋಲ್ ಮತ್ತು ಟೋಕಿಯೋ ಸೆನ್ಸೆಕ್ಸ್ ಇಳಿಕೆ ಕಂಡಿದ್ದು, ಮಿಶ್ರ ವಹಿವಾಟು ಮುಂದುವರಿದಿದೆ. ಸೋಮವಾರ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 37.78 ಅಂಕಗಳ ಇಳಿಕೆಯೊಂದಿಗೆ 54,288.61 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 51.45 ಅಂಕ ಇಳಿಕೆಯಾಗಿದ್ದು, 16,214.70 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.