ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಶುಕ್ರವಾರ (ಫೆ.11) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ ಬರೋಬ್ಬರಿ 946.67 ಅಂಕಗಳಷ್ಟು ಕುಸಿತ ಕಂಡಿದ್ದು, ಹೂಡಿಕೆದಾರರು ಭಾರೀ ನಷ್ಟ ಅನುಭವಿಸುವಂತಾಗಿದೆ.
ಇದನ್ನೂ ಓದಿ:ಮಧ್ಯಂತರ ಆದೇಶದ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ರಾಷ್ಟ್ರೀಯ ವಿಚಾರ ಮಾಡಬೇಡಿ ಎಂದು ಸೂಚನೆ
ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 941.67 ಅಂಕ ಇಳಿಕೆಯಾಗಿದ್ದು, 57,979.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 270 ಅಂಕ ಕುಸಿತ ಕಂಡಿದ್ದು, 17,340 ಅಂಕಗಳಲ್ಲಿ ವಹಿವಾಟು ನಡೆದಿದೆ.
ಇನ್ಫೋಸಿಸ್, ವಿಪ್ರೋ, ಟೆಕ್ ಮಹೀಂದ್ರ, ಎಚ್ ಸಿಎಲ್ ಟೆಕ್, ಎಚ್ ಡಿಎಫ್ ಸಿ, ಬಜಾಜ್ ಫೈನಾನ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಕಂಡಿದ್ದು, ಜೋಮಾಟೊ ಷೇರು ಮೌಲ್ಯ ಶೇ.6ರಷ್ಟು ನಷ್ಟ ಕಂಡಿರುವುದಾಗಿ ಪಿಟಿಐ ವರದಿ ಮಾಡಿದೆ.
ಮತ್ತೊಂದೆಡೆ ಎನ್ ಟಿಪಿಸಿ ಮತ್ತು ನೆಸ್ಲೆ ಇಂಡಿಯಾ ಷೇರುಗಳು ಮಾತ್ರ ಲಾಭಗಳಿಸಿದೆ. ಗುರುವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 460.06 ಅಂಕಗಳಷ್ಟು ಏರಿಕೆಯೊಂದಿಗೆ 58,926.03 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 142.05 ಅಂಕ ಏರಿಕೆಯಾಗಿದ್ದು, 17,605.85 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.